ಚಿಕ್ಕಮಗಳೂರು: ನಗರದ ಪ್ರೆಸ್‌ಕ್ಲಬ್‌ಗೆ ಶೀಘ್ರದಲ್ಲಿಯೇ ನಿವೇಶನ ನೀಡುವ ಭರವಸೆಯನ್ನು ಇಂಧನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ನೀಡಿದರು.
ನಗರದ ಸುಭಾಷ್‌ಚಂದ್ರ ಬೋಸ್ ಜಿಲ್ಲಾ ಆಟದ ಮೈದಾನದಲ್ಲಿ ಶನಿವಾರ ಜಿಲ್ಲಾಡಳಿತದಿಂದ ಆಯೋಜಿಸಿದ್ದ ೭೦ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಬಳಿಕ ಪ್ರೆಸ್‌ಕ್ಲಬ್‌ಗೆ ಆಗಮಿಸಿದ ಅವರು, ಪ್ಲೆಸ್‌ಕ್ಲಬ್ ವತಿಯಿಂದ ನೀಡಿದ ಮನವಿ ಸ್ವೀಕರಿಸಿ ಮಾತನಾಡಿದರು.
ಪ್ರೆಸ್‌ಕ್ಲಬ್‌ಗೆ ನಿವೇಶನ ನೀಡುವಂತೆ ಈಗಾಗಲೇ ಅನೇಕ ಬಾರಿ ಮನವಿ ಮಾಡಿದ್ದು, ಅದರಂತೆ ಶೀಘ್ರದಲ್ಲಿಯೇ ನಿವೇಶನ ನೀಡಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಅವರಿಗೆ ಸೂಚಿಸಿದರು.
ಶಾಸಕ ಎಚ್.ಡಿ.ತಮ್ಮಯ್ಯ ಮಾತನಾಡಿ, ಪತ್ರಕರ್ತರಿಗೆ ಅನುಕೂಲವಾಗುವಂತೆ ಪ್ರೆಸ್‌ಕ್ಲಬ್‌ಗೆ ನಿವೇಶನ ನೀಡಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಈ ಸಂಬAಧ ಸೂಕ್ತ ಜಾಗ ಗುರುತಿಸುವಂತೆ ಜಿಲ್ಲಾಧಿಕಾರಿಗಳಿಗೆ ತಿಳಿಸಿದರು.
ಜಿಲ್ಲಾಧಿಕಾರಿ ಸಿ.ಎನ್.ಮೀನಾನಾಗರಾಜ್ ಮಾತನಾಡಿ, ಪ್ರೆಸ್‌ಕ್ಲಬ್ ಕಾರ್ಯಚಟುವಟಿಕೆ ನಿರ್ವಹಿಸಲು ಅನುಕೂಲವಾಗುವಂತೆ ಸೂಕ್ತ ಸ್ಥಳವನ್ನು ಗುರುತಿಸಿ ಇನ್ನು ಒಂದು ತಿಂಗಳ ಒಳಗೆ ನೀಡಲಾಗುವುದು ಎಂದು ಭರವಸೆ ನೀಡಿದರು.
ಪ್ರೆಸ್‌ಕ್ಲಬ್‌ಗೆ ನಿವೇಶನದ ಅಗತ್ಯತೆಯ ಕುರಿತು ಹಿರಿಯ ಪತ್ರಕರ್ತ ಕೆ.ಜಯಕುಮಾರ್, ಉಮೇಶ್‌ಕುಮಾರ್ ಹಾಗೂ ದಿನೇಶ್ ಪಟವರ್ಧನ್ ಸಚಿವರಿಗೆ ಮನವರಿಕೆ ಮಾಡಿಕೊಟ್ಟರು.
ಪ್ರೆಸ್‌ಕ್ಲಬ್ ಅಧ್ಯಕ್ಷ ಸಿ.ಡಿ.ಚಂದ್ರೇಗೌಡ, ಪ್ರಧಾನ ಕಾರ್ಯದರ್ಶಿ, ಎನ್ ಕೆ ಗೋಪಿ, ಜಿಪಂ ಸಿಇಓ ಎಚ್.ಎಸ್.ಕೀರ್ತನಾ, ಎಸ್‌ಪಿ ಡಾ.ವಿಕ್ರಮ್ ಅಮಟೆ ಮತ್ತಿತರರಿದ್ದರು.