ಜಿಲ್ಲೆ

ಶುಕ್ರವಾರ ಹಾಸನಕ್ಕೆ ಇಂಧನ ಸಚಿವ ಜಾರ್ಜ್ ಭೇಟಿ

ಹಾಸನ: ಇಂಧನ ಸಚಿವರಾದ ಕೆ.ಜೆ. ಜಾರ್ಜ್‌ಅವರು ಜು.4ರ ಶುಕ್ರವಾರ ಹಾಸನ ಪ್ರವಾಸ ಮಾಡಲಿದ್ದಾರೆ. ಶುಕ್ರವಾರ ಬೆಳಗ್ಗೆ 9.50ಕ್ಕೆ ಹೆಲಿಕಾಪ್ಟರ್ ಮೂಲಕ ಭೂವನಹಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿ ಬೆಳಗ್ಗೆ 10 ಗಂಟೆಗೆ ಪಕ್ಷದ ಕಚೇರಿಗೆ ಭೇಟಿ ನೀಡಲಿದ್ದಾರೆ. ನಂತರ ಬೆಳಗ್ಗೆ 11.30 ಗಂಟೆಗೆಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲೆಯ ಎಲ್ಲ ಚುನಾಯಿತಜನ ಪ್ರತಿನಿಧಿಗಳೊಂದಿಗೆ ಇಂಧನ ಇಲಾಖೆಗೆ ಸಂಬಂಧಪಟ್ಟಂತೆ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ. ನಂತರ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಮಧ್ಯಾಹ್ನ 1.30 ರಿಂದ 2.15ಗಂಟೆ ವರೆಗಿನ ಕಾರ್ಯಕ್ರಮವನ್ನು ಕಾಯ್ದಿರಿಸಲಾಗಿದೆ.