ಜಿಲ್ಲೆ

ಶುದ್ಧ ಕುಡಿಯುವ ನೀರು ಪೂರೈಯಿಸಿ

ಯಾದಗಿರಿ: ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶಗಳ ವ್ಯಾಪ್ತಿಯಲ್ಲಿ ನಾಗರಿಕರಿಗೆ ಶುದ್ಧ ಕುಡಿಯುವ ನೀರು ಪೂರೈಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಬರ ಪರಿಹಾರ, ಕುಡಿಯುವ ನೀರು ಮತ್ತು ಮುಂಗಾರು ಪೂರ್ವ ಸಿದ್ಧತೆ ಕುರಿತು ಸೋಮವಾರ ಕರೆದಿದ್ದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಜನರಿಗೆ ಶುದ್ಧ ಕುಡಿಯುವ ನೀರು ಪೂರೈಕೆಯಾಗಬೇಕು. ಓವರ್ ಹೆಡ್ ಟ್ಯಾಂಕ್ ಮತ್ತು ನೀರಿನ ಮೂಲಗಳಿಂದ ಪರೀಕ್ಷೆಗೆ ಒಳಪಡಿಸಿ ಶುದ್ಧ ಕುಡಿಯುವ ನೀರು ಪೂರೈಸಲು ವಿಶೇಷ ಗಮನಹರಿಸಬೇಕು ಎಂದು ತಾಕೀತು ಮಾಡಿದರು.

ಜಿಲ್ಲೆಯಲ್ಲಿ ಬೇಸಿಗೆ ಕಾಲದಲ್ಲಿ ಅಧಿಕಾರಿಗಳು ಸಮರ್ಪಕವಾಗಿ ನೀರು ಸರಬರಾಜು ನಿರ್ವಹಣೆಯನ್ನು ಮಾಡಿದ್ದು ವಿವಿಧ ೫೪ ಗ್ರಾಮಗಳಲ್ಲಿ ಖಾಸಗಿ ಕೊಳವೆಬಾವಿ ಮಾಲೀಕರಿಂದ ಪಡೆದ ನೀರಿಗೆ ಸಂಬAಧಪಟ್ಟAತೆ ತಕ್ಷಣ ಬಿಲ್‌ನ್ನು ವಿಳಂಬ ಮಾಡದೆ ಪಾವತಿಸಬೇಕು. ಮುಂದಿನ ದಿನಗಳಲ್ಲಿಯೂ ಕೂಡ ನೀರಿನ ಮಾದರಿ ಪರೀಕ್ಷಿಸಿ ಶುದ್ಧ ನೀರು ಪೂರೈಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು.

ಮುAಗಾರು ಹಂಗಾಮಿನಲ್ಲಿ ರೈತರಿಗೆ ತೊಂದರೆ ಆಗದಂತೆ ನಿಗಾ ವಹಿಸಿ. ವಿಶೇಷವಾಗಿ ಕಳಪೆ ಗುಣಮಟ್ಟದ ಬೀಜ ರಸಗೊಬ್ಬರ ಸರಬರಾಜು ಆಗದಂತೆ ಎಚ್ಚರ ವಹಿಸಬೇಕು. ಗಡಿ ಭಾಗಗಳಲ್ಲಿ ಕಳಪೆ ಬೀಜ ಮತ್ತು ರಸಗೊಬ್ಬರ ಆಮದು ಆಗದಂತೆ ನೋಡಿಸಕೊಳ್ಳಬೇಕು. ರೈತರಿಗೆ ಮುಂದಿನ ದಿನಗಳಲ್ಲಿ ಬೀಜ ಮತ್ತು ರಸಗೊಬ್ಬರದ ಕೊರತೆಯಾಗದಂತೆ ವಿಶೇಷ ಮುನ್ನೆಚ್ಚರಿಕೆ ವಹಿಸಬೇಕು ಎಂಬುದು ಸೇರಿ ಕೃಷಿಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ಹಾಗೊಂದು ವೇಳೆ ಬೇಜವಾಬ್ದಾರಿ ವಹಿಸಿದ್ದಲ್ಲಿ ನಿರ್ಧಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.

ಜಲಜೀವನ ಮಿಷನ್, ಜಲಧಾರೆ, ವಿವಿಧ ಜಲಾಶಯಗಳ ಬಗ್ಗೆ ತೀವ್ರ ನಿಗಾ ವಹಿಸವುಂತೆ ಸೂಚಿಸಿದ ಅವರು, ಜಿಲ್ಲೆಯಲ್ಲಿನ ಶಿಕ್ಷಣ ಗುಣಮಟ್ಟ ಸುಧಾರಣೆಗೆ ಶಿಕ್ಷಕರ, ಪಾಲಕರ ಆಸಕ್ತಿ ಅತ್ಯಂತ ಪ್ರಮುಖವಾಗಿದೆ ಎಂದರು.

ಜಿಲ್ಲಾಧಿಕಾರಿ ಡಾ.ಸುಶೀಲಾ.ಬಿ., ಜಿಪಂ ಸಿಇಒ ಗರೀಮಾ ಪನ್ವಾರ್, ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ, ಸಹಾಯಕ ಆಯುಕ್ತ ಪ್ರಕಾಶ ಕುದರಿ ಸೇರಿ ಜಿಲ್ಲೆ ಹಾಗೂ ತಾಲೂಕು ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಮಳೆಯಿಂದಾಗುವ ನಷ್ಟ ತಡೆಗೆ ತಾಕೀತು: ಯಾದಗಿರಿಯಲ್ಲಿ ಒಂದು ವಾರದಲ್ಲಿ ಸುರಿದ ಭಾರಿ ಮಳೆ ಹಾನಿ ಕುರಿತು ಅಂದಾಜು ವೆಚ್ಚ ಸಿದ್ದಪಡಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಜಿಲ್ಲಾಡಳಿತಕ್ಕೆ ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಕರೆದಿದ್ದ ಅಧಿಕಾರಿಗಳ ಸಭೆ ನಂತರ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಮಳೆಗಾಲ ಇನ್ನೂ ಮುಂದೆ ಇದೆ. ಆದರೆ ಈಗಲೆ ಜಿಲ್ಲೆಯಲ್ಲಿ ಮಳೆ ಆರಂಭವಾಗಿದ್ದು, ಎರಡು ಸಲ ಬಂದ ಮಳೆಗೆ ಸಾಕಷ್ಟು ಹಾನಿಯಾಗಿದೆ. ಜೀವಹಾನಿ, ಆಸ್ತಿ ಹಾಗೂ ವಿವಿಧ ಇಲಾಖೆಗಳಿಗೆ ಸಂಬAಧಿಸಿದ ಅಮೂಲ್ಯ ವಸ್ತುಗಳು ಹಾನಿಗೊಳಲಾಗಿವೆ.

ಮುಂದಿನ ಮಳೆಗೆ ಹಾನಿಗೊಳಗಾಗುವುದನ್ನು ತಡೆಯಲು ಜಿಲ್ಲಾಡಳಿತ ಈಗಾಗಲೇ ಎಲ್ಲ ಸಿದ್ಧತೆ ಮಾಡಿಕೊಳ್ಳಬೇಕು ಸೂಚಿಸಲಾಗಿದೆ ಎಂದರು. ಮೂರು ತಿಂಗಳಲ್ಲಿ ಸಿಡಿಲಿಗೆ ಮೃತಪಟ್ಟ ಐವರಲ್ಲಿ ಮೂವರಿಗೆ ತಲಾ ಐದು ಲಕ್ಷ ರೂ. ಪರಿಹಾರ ನೀಡಲಾಗಿದೆ. ಈ ವಾರದಲ್ಲಿ ಇನ್ನೂ ಎರಡು ಕುಟುಂಬಗಳಿಗೆ ತಲಾ ಐದು ಲಕ್ಷ ರೂ. ಪರಿಹಾರ ನೀಡುವಂತೆ ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದಾರೆ ಹೇಳಿದರು. ಜಿಲ್ಲೆಯ ಯಾದಗಿರಿ, ಶಹಾಪುರ, ಸುರಪುರ ಮತ್ತು ಗುರುಮಠಕಲï ನಗರ ಪ್ರದೇಶಗಳು ಸೇರಿ ಅನೇಕ ಹಳ್ಳಿಗಳಲ್ಲಿ ಈ ಅಕಾಲಿಕ ಮಳೆಗೆ ಅಪಾರ ಹಾನಿಯಾಗಿದ್ದು, ಈ ಎಲ್ಲದ ಬಗ್ಗೆ ಅಧಿಕಾರಿಗಳು ತಂಡ ರಚಿಸಿ ಕೂಡಲೇ ಹಾನಿ ಅಂದಾಜು ಪಟ್ಟಿಸಿದ್ದಪಡಿಸಿ ಅದಕ್ಕೆ ಬೇಕಾದ ಪರಿಹಾರ ನೀಡಬೇಕು ಎಂದರು. ಕೃಷಿ, ನಗರಸಭೆ, ತಾಲೂಕು ಪಂಚಾಯಿತಿ, ಕಂದಾಯ ಇಲಾಖೆ,ವಿದ್ಯುತ ಇಲಾಖೆ, ಗ್ರಾಮೀಣ ಕುಡಿಯುವ ನೀರು ಸರಬರಾಜು ಹೀಗೆ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿದ ಸಚಿವರು, ತೋಟಗಾರಿಕೆ ಬೆಳೆಗಳು ಹಾಳಾದ ಬಗ್ಗೆ ಇತರೆ ಮಾಹಿತಿ ಕುರಿತು ಇಲಾಖೆ ಡಿಡಿಗೆ ಮಾಹಿತಿ ಕೇಳಲು ಸಚಿವರು ಕೂಗಿದಾಗ ಅಲ್ಲಿ ಡಿಡಿ ಇರಲಿಲ್ಲ. ಅವರನ್ನು ಕರೆಯಿರಿ ಎಂದು ಹೇಳಿದಾಗ ಓಡೋಡಿ ಬಂದು ಕೇಳಿದ ಮಾಹಿತಿ ನೀಡಿದ ಪ್ರಸಂಗ ನಡೆಯಿತು.

ಚರಂಡಿ ಶುಚಿತ್ವಕ್ಕೆ ಕ್ರಮ ಕೈಗೊಳ್ಳಿ: ನಗರ ಸೇರಿದಂತೆ ಜಿಲ್ಲೆಯ ಪ್ರತಿ ಹಳ್ಳಿಗಳಲ್ಲಿ ಮಳೆ ನೀರು ಚರಂಡಿ ಸೇರಿ ರಸ್ತೆ ಮೇಲೆ ಹರಿದಾಡುತ್ತಿದ್ದು, ಕೂಡಲೇ ನಗರಸಭೆ, ತಾಲೂಕು ಪಂಚಾಯಿತಿ ಮತ್ತು ಗ್ರಾಮ ಪಂಚಾಯಿತಿ ಪಿಡಿಒ ಸ್ಥಳಕ್ಕೆ ಭೇಟಿ ನೀಡಿ ಶುಚಿಗೊಳಿಸಲು ಕ್ರಮ ಕೈಗೊಳ್ಳಬೇಕು. ಅಲ್ಲದೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಬೇಕು ಎಂದರು. ಅಮೃತ ಯೋಜನೆಯಡಿ ಕೈಗೊಳ್ಳಲಾಗುತ್ತಿರುವ ಕಾಮಗಾರಿ ನಿಗದಿತ ಅವಧಿಯೊಳಗೆ ಮುಗಿಸಬೇಕು. ಮುಂಗಾರು ಬಿತ್ತನೆಗೆ ರೈತರಿಗೆ ಯಾವುದೇ ರೀತಿಯ ತೊಂದರೆಯಾಗದAತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು. ಸಭೆಯಲ್ಲಿದ್ದ ಜಿ¯್ಲÁಧಿಕಾರಿ ಇಲಾಖಾವಾರು ಮಾಹಿತಿ ನೀಡಿದರು.