ಜಿಲ್ಲೆ

ಶುಲ್ಕಮರುಪಾವತಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಎ.ಎಸ್.ಮಣಿಕಂಠ

ಚಾಮರಾಜನಗರ: ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ 2024-25ನೇ ಸಾಲಿಗೆ ನೀಡಲಾಗುತ್ತಿರುವ ಶುಲ್ಕಮರುಪಾವತಿ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಜೂ. 15ರವರೆಗೆ ವಿಸ್ತರಿಸಲಾಗಿದೆ.

ವೃತ್ತಿಪರ ಪದವಿ, ಸ್ನಾತಕೋತ್ತರ ಪದವಿ, ವೃತ್ತಿಪರ ಸ್ನಾತಕೋತ್ತರ ಪದವಿ ಮತ್ತು ನರ್ಸಿಂಗ್ ಕೋರ್ಸುಗಳಿಗೆ ಮಾತ್ರ ಶುಲ್ಕಮರುಪಾವತಿ ಗೆ ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಿಸಲಾಗಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ವೆಬ್‌ಸೈಟ್ ಅಥವಾ ದೂರವಾಣಿ ಸಂಖ್ಯೆ 1902 ಅನ್ನು ಸಂಪರ್ಕಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.