ಜಿಲ್ಲೆ

ಶುಲ್ಕಮರುಪಾವತಿ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ಚಾಮರಾಜನಗರ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2023-24ನೇ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸುಗಳಾದ ಸ್ನಾತಕೋತ್ತರ ಪದವಿ, ವೃತ್ತಿಪರ ಪದವಿ ಮತ್ತು ವ್ಯತ್ತಿಪರ ಸ್ನಾತಕೋತ್ತರ ಪದವಿ ಕೋರ್ಸುಗಳ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ಹಾಗೂ ಪ್ರವರ್ಗ-1ರ ಅಲೆಮಾರಿ, ಅರೆ ಅಲೆಮಾರಿ ಜನಾಂಗದ ವಿದ್ಯಾರ್ಥಿಗಳಿಂದ ಶುಲ್ಕಮರುಪಾವತಿ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಮಾ.15ರವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 1902 ಅನ್ನು ಸಂಪರ್ಕಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.