ಜಿಲ್ಲೆ

ಶೃಂಗೇರಿ ಕ್ಷೇತ್ರದ ಅಭಿವೃದ್ಧಿ ಅನುದಾನ ವಾಪಸ್ ಪಡೆದ ಬಿಜೆಪಿ

ಎನ್.ಆರ್.ಪುರ: ಎಂಎಡಿಬಿ ಅಧ್ಯಕ್ಷನಾದಾಗ ಶೃಂಗೇರಿ ಕ್ಷೇತ್ರಕ್ಕೆ ಮೀಸಲಿರಿಸಿದ 16 ಕೋಟಿ ರೂ. ಅನುದಾನವನ್ನು ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ದಿನವೇ ವಾಪಸ್ ಪಡೆದಿದ್ದರಿಂದ ಕ್ಷೇತ್ರದ ಕಾಮಗಾರಿಗಳಿಗೆ ಹಿನ್ನೆಡೆಯಾಗಿದೆ ಎಂದು ಶಾಸಕ ಟಿ.ಡಿ.ರಾಜೇಗೌಡ ಹೇಳಿದರು.

ಬಸ್ತಿಮಠದಲ್ಲಿ ಪ್ರವಾಸೋದ್ಯಮ ಇಲಾಖೆಯಿಂದ ಬಿಡುಗಡೆಯಾದ ಅನುದಾನದಲ್ಲಿ ತಡೆಗೋಡೆ ನಿರ್ವಣ, ವಿದ್ಯುತ್ ದೀಪ ಅಳವಡಿಕೆ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರ ಮುಂದುವರಿದಿದ್ದರೆ ಇದುವರೆಗೆ ಕ್ಷೇತ್ರ ಸಾಕಷ್ಟು ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿದ್ದವು ಎಂದು ತಿಳಿಸಿದರು.

ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಕ್ಷೇತ್ರದಲ್ಲಿ ವಿವಿಧ ರಸ್ತೆಗಳನ್ನು ಅಭಿವೃದ್ಧಿ ಪಡಿಸಲಾಗಿತ್ತು. ಬಸ್ತಿಮಠದ ಶ್ರೀ ಜ್ವಾಲಾಮಾಲಿನಿ ದೇವಸ್ಥಾನ, ಹಳೇಪೇಟೆ ಗುತ್ಱಮ್ಮ ದೇವಸ್ಥಾನ, ಕೋಟೆ ಮಾರಿಕಾಂಬ ದೇವಸ್ಥಾನ, ಮೇದರ ಬೀದಿ ಅಂತರಘಟ್ಟಮ್ಮ ದೇವಸ್ಥಾನಗಳಲ್ಲಿ ವಿದ್ಯುತ್ ದೀಪ ಅಳವಡಿಕೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಅಂದಿನ ಪ್ರವಾಸೋದ್ಯಮ ಇಲಾಖೆ ಸಚಿವ ಸಾ.ರಾ.ಮಹೇಶ್ 1 ಕೋಟಿ ರೂ. ಬಿಡುಗಡೆಮಾಡಿದ್ದರು ಎಂದು ಹೇಳಿದರು.

ಸಚಿವ ಸಿ.ಟಿ.ರವಿ ಅನುದಾನ ಬಿಡುಗಡೆ ಮಾಡಿದ್ದಾರೆ ಎಂದು ಮಾಜಿ ಶಾಸಕ ಡಿ.ಎನ್.ಜೀವರಾಜ್ ಸುಳ್ಳು ಹೇಳಿಕೆ ನೀಡಿದ್ದಾರೆ. ಹಾಲಿ ಸಚಿವರು ಒಂದು ರೂಪಾಯಿ ಅನುದಾನ ನೀಡಿಲ್ಲ. ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳು ಉತ್ತಮವಾಗಿ ನಡೆಯುತ್ತಿ್ತ್ದವು. ಆದರೆ ಈಗಿನ ಬಿಜೆಪಿ ಸರ್ಕಾರದ ಅವಧಿಯಿಂದ ಅಭಿವೃದ್ಧಿ ಕುಂಠಿತವಾಗಿದೆ ಎಂದು ದೂರಿದರು.