ಜಿಲ್ಲೆ

ಶೇ.100 ಜನನ-ಮರಣ ನೋಂದಣಿಗೆ ಕ್ರಮಕ್ಕೆ ಸೂಚನೆ

ಚಿತ್ರದುರ್ಗ: ಜಿಲ್ಲೆಯಲ್ಲಿ ಶೇ.100 ರಷ್ಟು ಜನನ-ಮರಣ ನೋಂದಣಿ ಪ್ರಕ್ರಿಯೆಯನ್ನು ಸಮರ್ಪಕವಾಗಿ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧಿಕಾರಿಗಳಿಗೆ ಸೂಚಿಸಿದರು. ಡಿಸಿ ಕಚೇರಿಯಲ್ಲಿ ಗುರುವಾರ ಜಿಲ್ಲಾ ಮಟ್ಟದ ನಾಗರಿಕ ನೋಂದಣಿ ಪದ್ಧತಿ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿ, ಜಿಲ್ಲೆಯ ಎಲ್ಲ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರು, ಆಶಾ,ಅಂಗನವಾಡಿ ಕಾರ‌್ಯಕರ್ತೆಯರು, ವೈದ್ಯಾಧಿಕಾರಿಗಳು,ಗ್ರಾಪಂ ಸದಸ್ಯರು,ಕಾರ‌್ಯದರ್ಶಿಗಳು, ಬಿಲ್‌ಕಲೆಕ್ಟರ್,ವಾಟರ್‌ಮ್ಯಾನ್, ಈ ನೋಂದಣಿ ಕಾರ‌್ಯದಲ್ಲಿ ಭಾಗವಹಿಸಿ ಶೇ.100 ಪ್ರಗತಿ ಸಾಧಿಸಬೇಕೆಂದರು. ಜಿಲ್ಲಾ ಸಾಂಖ್ಯಿಕ ಅಧಿಕಾರಿ ಎನ್.ರವಿಕುಮಾರ್ ಈವರೆಗಿನ ಪ್ರಗತಿ ವಿವರಿಸಿದರು. ತಾಲೂಕು ಮಟ್ಟದ ಸಮನ್ವಯ ಸಮಿತಿ ಸಭೆ ನಡೆಸದ ಅಧಿಕಾರಿಗಳಿಗೆ ನೋಟಿಸ್ ಕೊಡುವಂತೆ ಡಿಸಿ ನಿರ್ದೇಶಿಸಿದರು.

ಸರ್ಕಾರಿ,ಖಾಸಗಿ ಆಸ್ಪತ್ರೆಗಳಲ್ಲಿ ಮರಣ ಸಂಭವಿಸಿದಾಗ ಅದಕ್ಕೆ ಕಾರಣ ಏನು ಎಂಬುದನ್ನು ವೈದ್ಯಕೀಯ ಪ್ರಮಾಣ ಪತ್ರದಲ್ಲಿ ದಾ ಖಲಿಸಿ ತಂತ್ರಾಂಶದಲ್ಲಿ ಅಪ್‌ಲೋಡ್ ಮಾಡಬೇಕೆಂದು ರವಿಕುಮಾರ್ ಹೇಳಿದರು. ಎಎಸ್‌ಪಿ ಎಸ್.ಜೆ.ಕುಮಾರಸ್ವಾಮಿ,ಡಿಎಚ್‌ಒ ಡಾ.ಜಿ.ಪಿ.ರೇಣುಪ್ರಸಾದ್,ತಾಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ.ಗಿರೀಶ್ ಮತ್ತಿತರ ಅಧಿಕಾರಿಗಳಿದ್ದರು.

----