ತುಮಕೂರು: ಜಿಲ್ಲೆಯಲ್ಲಿ ಕರೊನಾ ನಿಯಂತ್ರಣಕ್ಕೆ ಜಿಲ್ಲಾಡಳಿತ ಕ್ರಮಕೈಗೊಂಡಿದ್ದು ಶೇ.45 ಇದ್ದ ಪಾಸಿಟಿವ್ ಪ್ರವಾಣ ಶೇ.40ಕ್ಕೆ ತಗ್ಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವ್ಯಾಪಕವಾಗಿ ಹರಡುತ್ತಿದ್ದ ಕರೊನಾ
ನಿಯಂತ್ರಣಕ್ಕೆ ಜಿಲ್ಲಾಡಳಿತದಿಂದ ಹಾಸಿಗೆ, ಆಮ್ಲಜನಕ ಹಾಗೂ ವೈದ್ಯಕೀಯ ಚಿಕಿತ್ಸೆ ಸೇರಿ ಸರ್ಕಾರದ ವಾರ್ಗಸೂಚಿ ಕಟ್ಟುನಿಟ್ಟಾಗಿ ಜಾರಿಗೊಳಿಸಿ ಎಲ್ಲ ರೀತಿಯಲ್ಲಿಯೂ ಕ್ರಮಕೈಗೊಂಡ ಪರಿಣಾಮ ಕರೊನಾ ನಿಯಂತ್ರಣಕ್ಕೆ ಬರುವ ವಿಶ್ವಾಸವಿದೆ ಎಂದರು.
ಬೆಂಗಳೂರಿನಿಂದ ತುಮಕೂರಿಗೆ ಓಡಾಡುವವರ ಸಂಖ್ಯೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಸೋಂಕು ವ್ಯಾಪಕವಾಗಿ ಹರಡಲು ಕಾರಣವಾಗಿತ್ತು. ಆದರೆ, ಸರ್ಕಾರದ ಅನುಮತಿಯಿಲ್ಲದ ಕಾರಣ ಆರಂಭದಲ್ಲಿ ಜನರನ್ನು ನಿಯಂತ್ರಿಸಲು ಸಾಧ್ಯವಾಗಲಿಲ್ಲ, ಈಗ ಎಲ್ಲ ರೀತಿಯಲ್ಲಿಯೂ ಕ್ರಮ ಕೈಗೊಳ್ಳಲಾಗಿದ್ದು ಸೋಂಕು ತಗ್ಗುವ ವಿಶ್ವಾಸವಿದೆ ಎಂದು ಹೇಳಿದರು.
ಏಪ್ರಿಲ್ ತಿಂಗಳಲ್ಲಿ 18749 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಇವರಲ್ಲಿ 8812 ಸೋಂಕಿತರು ಗುಣಮುಖರಾಗಿದ್ದಾರೆ, ದುರಾದೃಷ್ಟ 69 ಸೋಂಕಿತರು ಸಾವನ್ನಪ್ಪಿದರು. ಮೇ 1ರಿಂದ 12ರ ವರೆಗೆ 26790 ಪಾಸಿಟಿವ್ ಪ್ರಕರಣ ವರದಿಯಾಗಿದ್ದು 12650 ಸೋಂಕಿತರು ಬಿಡುಗಡೆಯಾಗಿದ್ದಾರೆ ಹಾಗೂ 162 ಮಂದಿ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ ಆಮ್ಲಜನಕ ಸಮಸ್ಯೆಯಾಗದಂತೆ ಕ್ರಮ ವಹಿಸಲಾಗಿದೆ, ಜಿಲ್ಲಾಸ್ಪತ್ರೆ ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ ಆಮ್ಲಜನಕ ಉತ್ಪಾದನಾ ಟಕ ಸ್ಥಾಪನೆಗೆ ಚಿಂತನೆ ನಡೆಸಲಾಗಿದೆ. ಈಗಾಗಲೇ ಜಿಲ್ಲಾಸ್ಪತ್ರೆಯಲ್ಲಿ ಟಕ ನಿರ್ಮಾಣ ಆರಂಭವಾಗಿದ್ದು,110 ಆಮ್ಲಜನಕ ಸಾಂದ್ರಕಗಳ ಮೂಲಕ ಸೋಂಕಿತರಿಗೆ ಆಮ್ಲಜನಕ ನೀಡಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದರು.
ಕೈಗಾರಿಕೋದ್ಯಮಿಗಳಿಂದ 250 ಆಮ್ಲಜನಕ ಸಾಂದ್ರಕಗಳ ನೆರವು ಸಿಗಲಿದೆ, ಈ ಆಮ್ಲಜನಕ ಸಾಂದ್ರಕಗಳನ್ನು ಜಿಲ್ಲಾಸ್ಪತ್ರೆ ಸೇರಿದಂತೆ ತಾಲೂಕು ಆಸ್ಪತ್ರೆಗಳಿಗೂ ನೀಡಿ ಸೋಂಕಿತರಿಗೆ ಸಮಸ್ಯೆಯಾಗದಂತೆ ಆಮ್ಲಜನಕ ಪೂರೈಕೆ ವಾಡಲಾಗುವುದು. ಎಲ್ಲ ತಾಲೂಕು ಆಸ್ಪತ್ರೆಗಳಲ್ಲಿಯೂ ಉತ್ತಮ ಕಾರ್ಯ ನಡೆಯುತ್ತಿದೆ, ಇದರಿಂದ ಜಿಲ್ಲಾಸ್ಪತ್ರೆ ಮೇಲಿನ ಒತ್ತಡ ತಗ್ಗಿದೆ. ಜಿಲ್ಲೆಗೆ 23ಕೆಎಲ್ ಆಮ್ಲಜನಕದ ಅಗತ್ಯವಿದ್ದು, ಸದ್ಯ 16ಕೆಎಲ್ ವಾತ್ರ ಲಭ್ಯವಿದೆ, ಕೊರತೆಯಿರುವ ಆಮ್ಲಜನಕದ ಬೇಡಿಕೆ ಪೂರೈಸುವಂತೆ ಮನವಿ ವಾಡಿದ್ದರಿಂದ 23ಕೆಎಲ್ ಆಮ್ಲಜನಕ ಹಂಚಿಕೆಯಾಗಿದ್ದು, ಅಗತ್ಯಕ್ಕನುಗುಣವಾಗಿ ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆ ಸೇರಿದಂತೆ ಖಾಸಗಿ ಆಸ್ಪತ್ರೆಗಳಲ್ಲಿ ಹಾಸಿಗೆ ಹೆಚ್ಚಿಸಲಾಗುವುದು ಎಂದರು.
ತುಮಕೂರಿನ ಲ್ಯಾಬ್‌ನಲ್ಲಿ ಎರಡೂವರೆ ಸಾವಿರ ಮತ್ತು ತಿಪಟೂರು ಲ್ಯಾಬ್‌ನಲ್ಲಿ ಒಂದೂವರೆ ಸಾವಿರ ಪರೀಕ್ಷೆ ವಾಡಲಾಗುತ್ತಿದೆ, ಇದಲ್ಲದೆ ಶಿರಾದಲ್ಲೂ ಲ್ಯಾಬ್ ತೆರೆಯಲು ಯೋಜನೆ ರೂಪಿಸಲಾಗಿದ್ದು, ಶ್ರೀ ಪ್ರಾರಂಭವಾಗಲಿದೆ. ಈ ಲ್ಯಾಬ್‌ನಲ್ಲಿಯೂ ಒಂದು ಸಾವಿರ ಕೋವಿಡ್ ಪರೀಕ್ಷೆ ವಾಡಬಹುದು. ಇದಲ್ಲದೆ, ಲ್ಯಾಬ್ ಆನ್ ರೋಡ್ ವಾಹನದ ಮೂಲಕ ಸ್ಥಳಕ್ಕೆ ಹೋಗಿ ಟೆಸ್ಟಿಂಗ್ ವಾಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು. ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ, ಜಿಪಂ ಸಿಇಒ ಕೆ ವಿದ್ಯಾಕುವಾರಿ, ಪೊಲೀಸ್ ಅಧೀಕ್ಷಕ ಡಾ.ಕೆ.ವಂಶಿಕೃಷ್ಣ ಇದ್ದರು.
ಸೋಂಕಿತರು ಕೋವಿಡ್ ಕೇರ್ ಕೇಂದ್ರಕ್ಕೆ ಬಂದು ಚಿಕಿತ್ಸೆ ಪಡೆಯಬೇಕು, ಹೋಂ ಐಸೋಲೇಷನ್‌ನಲ್ಲಿರುವ ಸೋಂಕಿತರನ್ನು ಕೇಂದ್ರಕ್ಕೆ ಸ್ಥಳಾಂತರಿಸುವ ಕಾರ್ಯ ನಡೆಯುತ್ತಿದೆ. ಇದರಿಂದ ಸೋಂಕು ಕುಟುಂಬಕ್ಕೆ ಹಬ್ಬುವುದನ್ನು ತಡೆಯಬಹುದು ಹಾಗಾಗಿ, ಮನೆಯಲ್ಲಿ ಉಳಿಯುವ ಸಾಹಸ ಮಾಡಬಾರದು. ಜೆ.ಸಿ.ಮಾಧುಸ್ವಾಮಿ ಜಿಲ್ಲಾ ಉಸ್ತುವಾರಿ ಸಚಿವ ಎಬಿಆರ್ಕ್ ಮೂಲಕ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ಸೋಂಕಿತರು ಯಾವುದೇ ಹಣ ಪಾವತಿಸುವ ಅಗತ್ಯವಿಲ್ಲ, ಖಾಸಗಿ ಆಸ್ಪತ್ರೆಗಳು ಚಿಕಿತ್ಸೆ ನಿರಾಕರಿಸಿದರೆ ಅಥವಾ ಚಿಕಿತ್ಸೆ ನೀಡಲು ಹಣ ಪಡೆದ ಬಗ್ಗೆ ದಾಖಲೆ ಸಮೇತ ವಾಹಿತಿ ಒದಗಿಸಿದರೆ ಕ್ರಮ ಕೈಗೊಳ್ಳಲಾಗುವುದು. ವೈ.ಎಸ್.ಪಾಟೀಲ ಜಿಲ್ಲಾಧಿಕಾರಿ