ಜಿಲ್ಲೆ

ಶೇ.50 ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ

ಚಿತ್ರದುರ್ಗ:ಗಣರಾಜ್ಯೋತ್ಸವದ ಅಂಗವಾಗಿ 2025ರ ಜನವರಿ ಅಂತ್ಯದವರೆಗೆ ಕನ್ನಡ ಪುಸ್ತಕ ಪ್ರಾಧಿಕಾರದ( ಠಿಠಿ://. ಚ್ಟ್ಞಠಿ.ಜಟ.ಜ್ಞಿ)ಎಲ್ಲ ಪುಸ್ತಕಗಳನ್ನು ಶೇ.50ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಿದೆ. ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆ(080-22107705)ಹಾಗೂ ಎಲ್ಲ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಗಳು ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಈ ರಿಯಾಯಿತಿ ಸೌಲಭ್ಯ ದೊರೆಯಲಿದೆ ಎಂದು ಪ್ರಾಧಿಕಾರದ ಆಡಳಿತಾಧಿಕಾರಿ ಕೆ.ಬಿ.ಕಿರಣ್ ಸಿಂಗ್ ತಿಳಿಸಿದ್ದಾರೆ.