ಜಿಲ್ಲೆ

ಶೇ.50 ರಿಯಾಯಿತಿ ಪುಸ್ತಕ ಮಾರಾಟ

ಚಿತ್ರದುರ್ಗ:ಸ್ವಾತಂತ್ರ್ಯೋತ್ಸವದ ಅಂಗವಾಗಿ 2024ರ ಆಗಸ್ಟ್ ತಿಂಗಳೀಡಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲ ಪುಸ್ತಕಗಳನ್ನು ಶೇ.50ರ ರಿಯಾ ಯಿತಿ ದರದಲ್ಲಿ ಮಾರಾಟ ಮಾಡಲಾಗುತ್ತಿದೆ. ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆ,ಎಲ್ಲ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿ ಹಾಗೂ ಕನ್ನಡ ಪುಸ್ತಕಪ್ರಾಧಿಕಾರದಿಂದ ತೆರೆದಿರುವ ಎಲ್ಲ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ರಿಯಾಯಿತಿ ಸೌಲಭ್ಯ ದೊರೆಯಲಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಕೆ.ಬಿ.ಕಿರಣ್‌ಸಿಂಗ್ ತಿಳಿಸಿದ್ದಾರೆ.