ರಾಯಚೂರಿನ ಜಿ.ಪಂ. ಸಭಾಂಗಣದಲ್ಲಿ ಜಿ.ಪಂ. ಸಿಇಒ ಶಶಿಧರ ಕುರೇರ ಅಧ್ಯಕ್ಷತೆಯಲ್ಲಿ ಬುಧವಾರ ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಗತಿ ಪರಿಶೀಲನಾ ಸಭೆ ಜರುಗಿತು. ಡಿಡಿಪಿಐ ವೃಷಭೇಂದ್ರಸ್ವಾಮಿ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಮಹೇಶ ಪೋತದಾರ, ಜಿಲ್ಲಾ ಶಿಕ್ಷಣಾಕಾರಿ ಆರ್.ಇಂದಿರಾ, ಅಕ್ಷರ ದಾಸೋಹ ಯೋಜನಾಕಾರಿ ಡಾ.ಈರಣ್ಣ ಕೊಸಗಿ, ಉಪ ಯೋಜನಾ ಸಮನ್ವಯಾಕಾರಿ ಪ್ರಭು ಕಣ್ಣನ್, ಜಿಲ್ಲಾ ವಯಸ್ಕರ ಶಿಕ್ಷಣಾಕಾರಿ ಮಲ್ಲಿಕಾರ್ಜುನ ಇದ್ದರು. 
ಜಿಲ್ಲೆ

ಶೈಕ್ಷಣಿಕ ಪ್ರಗತಿಗೆ ಜವಾಬ್ದಾರಿಯಿಂದ ಕೆಲಸ ಮಾಡಿ

ರಾಯಚೂರು
ಜಿಲ್ಲೆಯಲ್ಲಿ ಶೈಕ್ಷಣಿಕ ಪ್ರಗತಿ ಮತ್ತು ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಲಿತಾಂಶ ತರುವ ನಿಟ್ಟಿನಲ್ಲಿ ಶಿಕ್ಷಕರು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಕಾರಿ ಶಶಿಧರ ಕುರೇರ ತಿಳಿಸಿದರು.
ಸ್ಥಳೀಯ ಜಿ.ಪಂ. ಸಭಾಂಗಣದಲ್ಲಿ ಬುಧವಾರ ಜರುಗಿದ ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಗತಿ ಪರಿಶೀಲನೆ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳ ಕಲಿಕಾ ಮಟ್ಟವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ಅನುಷ್ಠಾನಗೊಳಿಸಲು ಮುಂದಾಗಬೇಕು ಎಂದು ಸಲಹೆ ನೀಡಿದರು.
ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ಶೇ.40ಕ್ಕಿಂತ ಕಡಿಮೆ ಲಿತಾಂಶವಿರುವ ಶಾಲೆಗಳನ್ನು ಗುರುತಿಸಿ ವಿದ್ಯಾರ್ಥಿಗಳಿಗೆ ಅರ್ಥವಾಗುವಂತೆ ಉತ್ತಮ ರೀತಿಯಲ್ಲಿ ಬೋಧನೆ ಮಾಡಬೇಕು. ಜತೆಗೆ ವಿಶೇಷ ತರಗತಿಗಳನ್ನು ನಡೆಸಿ ಲಿತಾಂಶ ಹೆಚ್ಚಳಕ್ಕೆ ಮುಂದಾಗಬೇಕು.
ವಿದ್ಯಾರ್ಥಿಗಳ ಹಾಜರಾತಿ ಮತ್ತು ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆಯುವ ನಿಟ್ಟಿನಲ್ಲಿ ವ್ಯವಸ್ಥೆಯಲ್ಲಿ ಸುಧಾರಣೆ ಮಾಡಿಕೊಳ್ಳಬೇಕು. ಯಾವುದೇ ಸಮಸ್ಯೆಗಳಿದ್ದರೂ ಬಗೆಹರಿಸಲು ಅಗತ್ಯ ಕ್ರಮಕೈಗೊಳ್ಳಬೇಕು. ಇಚ್ಛಾಶಕ್ತಿ ಮತ್ತು ಪರಿಣಾಮಕಾರಿಯಾಗಿ ಕಾರ್ಯಕ್ರಮ ಅನುಷ್ಠಾನಗೊಳಿಸಿದಾಗ ಮಾತ್ರ ಯಶಸ್ಸು ದೊರೆಯಲು ಸಾಧ್ಯ ಎಂದು ಶಶಿಧರ ಕುರೇರ ಹೇಳಿದರು.
ಡಿಡಿಪಿಐ ವೃಷಭೇಂದ್ರಯ್ಯಸ್ವಾಮಿ ಮಾತನಾಡಿ, ಪ್ರತಿಯೊಂದು ಶಾಲೆಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟ ಹೆಚ್ಚಳಕ್ಕೆ ಶಿಕ್ಷಕರು ಸಮರ್ಪಕ ರೀತಿಯಲ್ಲಿ ಕಾರ್ಯನಿರ್ವಹಿಸಬೇಕು. ಪರೀಕ್ಷೆಗಳನ್ನು ಸುಗಮ ಹಾಗೂ ಸಮರ್ಪಕ ರೀತಿಯಲ್ಲಿ ನಡೆಸಲು ಎಲ್ಲರೂ ಸಂಕಲ್ಪ ತೊಡಬೇಕು ಎಂದರು.
ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಮಹೇಶ ಪೋತದಾರ, ಜಿಲ್ಲಾ ಶಿಕ್ಷಣಾಕಾರಿ ಆರ್.ಇಂದಿರಾ, ಅಕ್ಷರ ದಾಸೋಹ ಯೋಜನಾಕಾರಿ ಡಾ.ಈರಣ್ಣ ಕೊಸಗಿ, ಉಪ ಯೋಜನಾ ಸಮನ್ವಯಾಕಾರಿ ಪ್ರಭು ಕಣ್ಣನ್, ಜಿಲ್ಲಾ ವಯಸ್ಕರ ಶಿಕ್ಷಣಾಕಾರಿ ಮಲ್ಲಿಕಾರ್ಜುನ, ಬಿಇಒಗಳಾದ ಚಂದ್ರಶೇಖರ ಭಂಡಾರಿ, ಸುಖದೇವ, ಚಂದ್ರಶೇಖರ ದೊಡ್ಡಮನಿ, ಶರಣಪ್ಪ ವಟಗಲ್, ಉಂಬಣ್ಣ ರಾಥೋಡ್ ಉಪಸ್ಥಿತರಿದ್ದರು.