ರಾಮದುರ್ಗ: ಶೈಕ್ಷಣಿಕ ಪ್ರಗತಿಯಿಂದ ಮಾತ್ರ ವ್ಯಕ್ತಿತ್ವ ವಿಕಸನ ಸಾಧ್ಯ. ಹಾಗಾಗಿ ವಿದ್ಯಾರ್ಥಿಗಳು ಉನ್ನತ ಸಾಧನೆ ಮಾಡುವಂತೆ ಶಿಕ್ಷಕರು ಕಾರ್ಯ ನಿರ್ವಹಿಸಬೇಕು ಎಂದು ಶಾಸಕ ಅಶೋಕ ಪಟ್ಟಣ ಹೇಳಿದರು.
ಪಟ್ಟಣದ ತಾಲೂಕು ಪಂಚಾಯಿತಿ ಸಭಾ ಭವನದಲ್ಲಿ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘ ರಾಮದುರ್ಗ ತಾಲೂಕು ಘಟಕದ ನೇತೃತ್ವದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಶೈಕ್ಷಣಿಕ ಕಾರ್ಯಾಗಾರ, ಎಸ್‌ಎಸ್‌ಎಲ್‌ಸಿಯಲ್ಲಿ ಉತ್ತಮ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಹಾಗೂ ಉತ್ತಮ ಲಿತಾಂಶ ಪಡೆದ ಶಾಲೆಗಳಿಗೆ ಮಂಗಳವಾರ ಹಮ್ಮಿಕೊಂಡಿದ್ದ ಸತ್ಕಾರ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಶಿಕ್ಷಣ ಕ್ಷೇತ್ರದ ಪ್ರಗತಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ಸರ್ಕಾರ ಬದ್ಧವಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ರಾಮದುರ್ಗ ಪ್ರಥಮ ಸ್ಥಾನ ಪಡೆದಿರುವುದು ಹೆಮ್ಮೆಯ ವಿಷಯ. ಮುಂಬರುವ ದಿನಗಳಲ್ಲಿ ರಾಮದುರ್ಗ ತಾಲೂಕು ರಾಜ್ಯ ಮಟ್ಟದಲ್ಲಿಯೂ ಉತ್ತಮ ಲಿತಾಂಶದ ಪಡೆಯುಂತಾಗಲು ಶಿಕ್ಷಕರು ಶ್ರಮಿಸಬೇಕು ಎಂದರು.
ರಾಜ್ಯ ಸಂಘಟನೆಯ ಪ್ರಧಾನ ಕಾರ್ಯದರ್ಶಿ ರಾಮು ಗುಗವಾಡ, ಜಿಲ್ಲಾಧ್ಯಕ್ಷ
ಎಸ್.ಎಂ.ಪಾಟೀಲ ಮಾತನಾಡಿದರು. ಎಸ್‌ಎಸ್‌ಎಲ್‌ಸಿ ಪರೀಕ್ಷಾ ವಿಧಾನ ಮತ್ತು ತಯಾರಿ ಕುರಿತು ಆನಂದ ಜೋಶಿ ಹಾಗೂ ಜಿ.ಎ ಹುಲ್ಲೂರ ಉಪನ್ಯಾಸ ನೀಡಿದರು.
ಪ್ರಭಾರಿ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಎಚ್. ಪ್ರಭಾಕರ, ಸಮನ್ವಯಾಧಿಕಾರಿ ಜಿ.ಸಿ.ಶೀಲವಂತಮಠ, ಕರಲಿಂಗಪ್ಪನವರ, ಎಸ್.ವೈ.ಸನ್ನಿ, ಆರ್.ಬಿ.ಜಮಖಾನಿ, ಎಂ.ಎನ್.ಕರಡಿಗುಡ್ಡ, ವೀರೇಶ
ಗಣಾಚಾರಿ, ತಾಲೂಕು ಅಧ್ಯಕ್ಷ ಎಸ್.ಬಿ.ಏಣಿ, ಶಿಕ್ಷಕರಾದ ಎ.ವಿ.ಪಾಟೀಲ, ಎಂ.ಎಸ್.ಜಂಗವಾಡ, ಸಂದೀಪಕುಮಾರ ಇತರರಿದ್ದರು.