ಕಟ್ಟಡ ಕಾರ್ಮಿಕರ ಶೈಕ್ಷಣಿಕ ಸಹಾಯಧನ ಬಿಡುಗಡೆ ಮಾಡುವಂತೆ ಒತ್ತಾಯಿಸಿ ರಾಯಚೂರಿನ ಕಾರ್ಮಿಕ ಇಲಾಖೆ ಕಚೇರಿ ಮುಂದೆ ಕರ್ನಾಟಕ ರಾಜ್ಯ ಸಂಯುಕ್ತ ಕಟ್ಟಡ ಕಾರ್ಮಿಕರ ಸಂಘದಿಂದ ಮಂಗಳವಾರ ಪ್ರತಿಭಟನೆ ನಡೆಸಲಾಯಿತು. ಸಂಘದ ಸಂಚಾಲಕ ತಿರುಮಲರಾವ್, ಪದಾಕಾರಿಗಳಾದ ಅಣ್ಣಪ್ಪ, ಗುರುನಾಥ, ಅಯ್ಯಪ್ಪ ಬಡಿಗೇರ, ವೆಂಕಟೇಶ, ಸುಪ್ರಿತ ಇದ್ದರು. 
ಜಿಲ್ಲೆ

ಶೈಕ್ಷಣಿಕ ಸಹಾಯಧನ ಮಂಜೂರು ಮಾಡಿ

ರಾಚಯ್ಯ ಸ್ವಾಮಿ

ರಾಯಚೂರು: ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಸಹಾಯಧನ ಮಂಜೂರು ಮಾಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಸ್ಥಳೀಯ ಕಾರ್ಮಿಕ ಇಲಾಖೆ ಕಚೇರಿ ಮುಂದೆ ಕರ್ನಾಟಕ ರಾಜ್ಯ ಸಂಯುಕ್ತ ಕಟ್ಟಡ ಕಾರ್ಮಿಕರ ಸಂಘದಿಂದ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.
ನಂತರ ಕಾರ್ಮಿಕ ನಿರೀಕ್ಷಕ ವೆಂಕಟಸ್ವಾಮಿಗೆ ಮನವಿ ಸಲ್ಲಿಸಿ, ಕಳೆದ ಎರಡು ವರ್ಷಗಳಿಂದ ಶೈಕ್ಷಣಿಕ ಸಹಾಯಧನವನ್ನು ಬಿಡುಗಡೆ ಮಾಡಿಲ್ಲ. ಜತೆಗೆ ಕಾರ್ಮಿಕರಿಗೆ ಸಿಗಬೇಕಾದ ಸೌಲಭ್ಯಗಳನ್ನು ನೀಡುತ್ತಿಲ್ಲ ಎಂದು ದೂರಿದರು.
ಕಾರ್ಮಿಕರು ಮನೆ ಕಟ್ಟಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇಂದಿಗೂ ಬಹುತೇಕ ನೈಜ ಕಾರ್ಮಿಕರು ನೋಂದಣಿಯಾಗದೆ ಹೊರಗುಳಿದಿದ್ದು, ಮತ್ತೊಂದೆಡೆ ಕಾರ್ಮಿಕರಲ್ಲದವರು ಅನಕೃತವಾಗಿ ನೋಂದಣಿ ಮಾಡಿಕೊಳ್ಳುತ್ತಿದ್ದು, ಕಾರ್ಮಿಕರ ಮಂಡಳಿ ಹಣ ಅನವಶ್ಯಕವಾಗಿ ಪೋಲಾಗುತ್ತಿದೆ.
ಪ್ರಸಕ್ತ ಸಾಲಿನ ಶೈಕ್ಷಣಿಕ ಸಹಾಯಧನದ ಅರ್ಜಿ ಸ್ವೀಕರಿಸುವ ಪ್ರಕ್ರಿಯೆ ಆರಂಭಿಸಬೇಕು. ಅರ್ಹ ಕಾರ್ಮಿಕರಿಗೆ ಪಿಂಚಣಿಗಾಗಿ 6 ತಿಂಗಳೊಳಗೆ ಅರ್ಜಿ ಸಲ್ಲಿಸಬೇಕು ಎನ್ನುವ ನಿಯಮವನ್ನು ತೆಗೆದು ಹಾಕಬೇಕು. 5 ಲಕ್ಷ ರೂ.ವರೆಗೆ ನಗದು ರಹಿತ ಆರೋಗ್ಯ ಸೇವೆಯನ್ನು ಕಾರ್ಮಿಕರು ಮತ್ತು ಅವರ ಅವಲಂಬಿತರಿಗೆ ನೀಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಪ್ರತಿಭಟನೆಯಲ್ಲಿ ಸಂಘದ ಸಂಚಾಲಕ ತಿರುಮಲರಾವ್, ಪದಾಕಾರಿಗಳಾದ ಅಣ್ಣಪ್ಪ, ಗುರುನಾಥ, ಅಯ್ಯಪ್ಪ ಬಡಿಗೇರ, ವೆಂಕಟೇಶ, ಸುಪ್ರಿತ ಹಾಗೂ ಕಾರ್ಮಿಕರು ಪಾಲ್ಗೊಂಡಿದ್ದರು.