ಚಾಮರಾಜನಗರ: ಕಾರ್ಮಿಕ ಇಲಾಖೆ, ಕರ್ನಾಟಕ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕ ಸಾಮಾಜಿಕ ಭದ್ರತಾ ಮಂಡಳಿ, ಸಾರಿಗೆ ಇಲಾಖೆ, ಚಾಮರಾಜನಗರ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ಸಹಯೋಗದಲ್ಲಿ ಆ.6ರಂದು ಶ್ರಮಿಕ ವಸತಿ ಸಮುಚ್ಚಯಗಳ ಉದ್ಘಾಟನೆ ಕಾರ್ಯಕ್ರಮ ಆಯೋಜಿಸಲಾಗಿದೆ.
ತಾಲೂಕಿನ ಬದನಗುಪ್ಪೆ ಗ್ರಾಮದ ಬದನಗುಪ್ಪೆ-ಕೆಲ್ಲಂಬಳ್ಳಿ ಕೈಗಾರಿಕಾ ಪ್ರದೇಶದ ನಿರ್ಮಾಣ ಮಾಡಿರುವ ಶ್ರಮಿಕ ವಸತಿ ಸಮುಚ್ಚಯ ಉದ್ಘಾಟನೆ ಮತ್ತು ವಿವಿಧ ಅಸಂಘಟಿತ ವರ್ಗಗಳ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಹಾಗೂ ಅರಿವು ಕಾರ್ಯಕ್ರಮವನ್ನು ಅಂದು ಬೆಳಗ್ಗೆ 11 ಗಂಟೆಗೆ ಹಮ್ಮಿಕೊಳ್ಳಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಕಾರ್ಯಕ್ರಮ ಉದ್ಘಾಟಿಸುವರು. ಕಾರ್ಮಿಕ ಸಚಿವ ಸಂತೋಷ್.ಎಸ್.ಲಾಡ್ ಸಮುಚ್ಚಯ ಉದ್ಘಾಟನೆ ನೆರವೇರಿಸುವರು. ಎಂಎಸ್‌ಐಎಲ್ ಅಧ್ಯಕ್ಷ ಸಿ.ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು.
ಸಂಸದ ಸುನೀಲ್ ಬೋಸ್, ಶಾಸಕರಾದ ಎ.ಆರ್. ಕೃಷ್ಣಮೂರ್ತಿ, ಎಚ್.ಎಂ. ಗಣೇಶ್ ಪ್ರಸಾದ್, ಎಂ.ಆರ್. ಮಂಜುನಾಥ್, ಡಾ. ಡಿ. ತಿಮ್ಮಯ್ಯ, ಸಿ.ಎನ್. ಮಂಜೇಗೌಡ, ಮಧು. ಜಿ. ಮಾದೇಗೌಡ, ಕೆ. ವಿವೇಕಾನಂದ, ಕಾವೇರಿ ಜಲಾನಯನ ಯೋಜನೆ ಅಚ್ಚುಕಟ್ಟು ಪ್ರದೇಶಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷರಾದ ಪಿ. ಮರಿಸ್ವಾಮಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಎಚ್.ವಿ. ಚಂದ್ರು, ಚಾಮರಾಜನಗರ-ರಾಮಸಮುದ್ರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಮ್ಮದ್ ಅಸ್ಗರ್, ಬದನಗುಪ್ಪೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಲ್ಲೇಶ್ ಹಾಜರಿರುವರು. ರಾಜ್ಯ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಸದಸ್ಯ ಎಚ್.ಜಿ. ರಮೇಶ್, ಶ್ರೀಯಾನ್ಸ್ ಕುಮಾರ್ ಜೈನ್, ಕೆ.ಪಿ. ಜಾನಿ, ಬಸಪ್ಪ, ವಿಜಯಕುಮಾರ್ ಎನ್. ಪಾಟೀಲ್ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.