ಬೀರೂರು ಸಮೀಪದ ದೇವರಹಳ್ಳಿ ಶ್ರೀ ಅಂತರಘಟ್ಟಮ್ಮ ದೇವಸ್ಥಾನಕ್ಕೆ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 1.50 ಲಕ್ಷ ರೂ. ಮೊತ್ತದ ಡಿಡಿಯನ್ನು ಯೋಜನಾಧಿಕಾರಿ ಸಂಜೀವ್ ಗೌಡ ಹಸ್ತಾಂತರಿಸಿದರು. ಮಲ್ಲೇಶ, ವಸಂತ್, ಚಂದನ್, ನಾಗರತ್ನಾ ಇತರರಿದ್ದರು. 
ಜಿಲ್ಲೆ

ಶ್ರೀ ಅಂತರಘಟ್ಟಮ್ಮ ದೇಗುಲಕ್ಕೆ ರೂ.1.50 ಲಕ್ಷ ನೆರವು

ಎಸ್.ಎನ್.ರವೀಂದ್ರ

ಬೀರೂರು: ಮಾನಸಿಕ ಹಾಗೂ ದೈಹಿಕವಾಗಿ ಕುಗ್ಗಿರುವ ಮನಸ್ಸಿಗೆ ದೇವಾಲಯಗಳು ನೆಮ್ಮದಿ ನೀಡುವ ಕೇಂದ್ರಗಳಾಗಿವೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾಧಿಕಾರಿ ಸಂಜೀವ್ ಗೌಡ ತಿಳಿಸಿದರು.

ದೇವರಹಳ್ಳಿಯಲ್ಲಿ ನಿರ್ಮಿಸುತ್ತಿರುವ ಶ್ರೀ ಅಂತರಘಟ್ಟಮ್ಮ ದೇವಿ ದೇವಸ್ಥಾನಕ್ಕೆ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಂಜೂರಾಗಿದ್ದ 1.50 ಲಕ್ಷ ರೂ. ಮೊತ್ತದ ಡಿಡಿಯನ್ನು ಶನಿವಾರ ವಿತರಿಸಿ ಮಾತನಾಡಿದರು.

ದೇವರಹಳ್ಳಿ ಅಭಿವೃದ್ಧಿಗೊಳ್ಳುತ್ತಿರುವ ಗ್ರಾಮ. ಚಿಕ್ಕ ಗ್ರಾಮವಾದರೂ ಇಲ್ಲಿಯ ಗ್ರಾಮಸ್ಥರು ಭವ್ಯವಾದ ದೇವಸ್ಥಾನ ನಿರ್ಮಾಣಕ್ಕೆ ಮುಂದಾಗಿರುವುದು ಶ್ಲಾಘನೀಯ. ಇಂತಹ ಕಾರ್ಯಗಳಿಗೆ ಪ್ರತಿಯೊಬ್ಬರೂ ಸಹಕಾರ ನೀಡಬೇಕು ಹಾಗೂ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯೂ ಅಭಿವೃದ್ಧಿಗೊಳ್ಳುತ್ತಿರುವ ಗ್ರಾಮಗಳ ಮೂಲ ಸೌಲಭ್ಯಕ್ಕಾಗಿ ಪ್ರೋತ್ಸಾಹ ನೀಡಲು ಸಿದ್ಧವಾಗಿರುತ್ತದೆ. ಅಲ್ಲದೆ ಸ್ಮಶಾನ ಅಭಿವೃದ್ಧಿ, ಕುಡಿಯುವ ನೀರಿನ ಸೌಲಭ್ಯ, ಸ್ವಚ್ಛತೆ ಸೇರಿದಂತೆ ವಿವಿಧ ಸಮಾಜಮುಖಿ ಕೆಲಸಗಳಿಗೆ ಬೆಂಬಲ ನೀಡುತ್ತಿದೆ ಎಂದರು.

ದೇವಸ್ಥಾನ ಸಮಿತಿ ಅಧ್ಯಕ್ಷ ಮಲ್ಲೇಶಪ್ಪ, ಕಾರ್ಯದರ್ಶಿ ವಸಂತ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೇಲ್ವಿಚಾರಕ ಚಂದನ್, ಸೇವಾಪ್ರತಿನಿಧಿ ನಾಗರತ್ನಾ, ದೇವಸ್ಥಾನ ಸಮಿತಿ ಸದಸ್ಯರು ಮತ್ತು ಗ್ರಾಮಸ್ಥರು ಇದ್ದರು.