ಚಿತ್ರದುರ್ಗ: ನಗರದ ಮೆದೇಹಳ್ಳಿ ರಸ್ತೆ ಶ್ರೀ ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ 25ನೇ ವರ್ಷದ ಬ್ರಹ್ಮೋತ್ಸವ ಅಂಗವಾಗಿ ಭಾನುವಾರ ವಿಶೇಷ ಮಹಾ ಅನ್ನ ದಾನ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಮೆದೇಹಳ್ಳಿ ಗ್ರಾಪಂ ಅಧ್ಯಕ್ಷೆ ಕೆ.ಎನ್. ಕಾವ್ಯಾ ವಿಜಯಕುಮಾರ್, ಮಾಜಿ ಅಧ್ಯಕ್ಷ ಉಜ್ಜಿನಿಸ್ವಾಮಿ, ವರ್ತಕರಾದ ಉದಯಶೆಟ್ಟಿ, ಸತೀಶ್, ವೈದ್ಯ ಹನುನಂತರೆಡ್ಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಟ್ರಸ್ಟ್ ಅಧ್ಯಕ್ಷ ಶರಣ್‌ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಟ್ರಸ್ಟ್ ಉಪಾಧ್ಯಕ್ಷ ಮಲ್ಲಿಕಾರ್ಜುನ್, ಕಾರ್ಯದರ್ಶಿ ವೆಂಕಟೇಶ್, ನಿರ್ದೇಶಕರು ಮತ್ತಿತರ ಗಣ್ಯರು ಇದ್ದರು.
ವಿಶೇಷ ಲಕ್ಷ ದೀಪೋತ್ಸವ: ಜ.13ರಂದು ಸಂಜೆ 6ಕ್ಕೆ ಶ್ರೀ ಅಯ್ಯಪ್ಪಸ್ವಾಮಿ ದೇವರ ಅಭರಣ ಮೆರವಣಿಗೆ ನಗರದ ಶ್ರೀ ನೀಲಕಂಠೇಶ್ವರ ದೇವಾಲಯದಿಂದ ನಗರದ ಪ್ರಮುಖ ಬೀದಿಗಳ ಮೂಲಕ ದೇವಾಲಯ ತಲುಪಲಿದೆ. 14ರಂದು ಸಂಜೆ ಮಕರ ಸಂಕ್ರಮಣದ ಅಂಗವಾಗಿ ವಿಶೇಷ ಲಕ್ಷ ದೀಪೋತ್ಸವ ಏರ್ಪಡಿಸಲಾಗಿದೆ ಎಂದು ದೇವಾಲಯದ ಪ್ರಕಟಣೆ ತಿಳಿಸಿದೆ.