ಅರಕಲಗೂಡು ತಾಲೂಕಿನ ಶಣವಿನಕುಪ್ಪೆ ಗ್ರಾಮದ ಶ್ರೀ ಆಂಜನೇಯಸ್ವಾಮಿ ದೇವಸ್ಥಾನ ಜೀರ್ಣೋದ್ಧಾರಕ್ಕೆ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬೈಚನಹಳ್ಳಿ ವಲಯ ವತಿಯಿಂದ ಸಹಾಯಧನದ ಚೆಕ್ ವಿತರಿಸಲಾಯಿತು. ಸಂತೋಷ್, ಹೇಮಾ, ಜಿನ್ನಪ್ಪ, ಲೀಲಾವತಿ ಇತರರಿದ್ದರು. 
ಜಿಲ್ಲೆ

ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಸೇವೆ ಶ್ಲಾಘನೀಯ

ರವಿಕುಮಾರ್ ಪಿ. ಕೆ

ಅರಕಲಗೂಡು: ಮಹಿಳಾ ಸಬಲೀಕರಣಕ್ಕೆ ಶ್ರಮಿಸುತ್ತಿರುವ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಸೇವಾ ಕಾರ್ಯಗಳು ಧಾರ್ಮಿಕ ಕಾರ್ಯಕ್ರಮಗಳಿಗೂ ವಿಸ್ತರಿಸಿರುವುದು ಶ್ಲಾಘನೀಯ ಎಂದು ಸಂತೆಮರೂರು ಗ್ರಾಪಂ ಸದಸ್ಯ ಸಂತೋಷ್ ಮೆಚ್ಚುಗೆ ವ್ಯಕ್ತಪಡಿಸಿದರು.

ತಾಲೂಕಿನ ಶಣವಿನಕುಪ್ಪೆ ಗ್ರಾಮದಲ್ಲಿ ಶ್ರೀ ಆಂಜನೇಯಸ್ವಾಮಿ ದೇವಸ್ಥಾನ ಜೀರ್ಣೋದ್ಧಾರಕ್ಕೆ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬೈಚನಹಳ್ಳಿ ವಲಯದ ವತಿಯಿಂದ ಮಂಗಳವಾರ ಆಯೋಜಿಸಿದ್ದ ಸಹಾಯಧನ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಗ್ರಾಮದಲ್ಲಿ ಅವನತಿ ಹೊಂದುತ್ತಿದ್ದ ದೇವಸ್ಥಾನ ಅಭಿವೃದ್ಧಿಪಡಿಸಲು ಹಲವಾರು ದಾನಿಗಳು ಸಹಾಯ ಮಾಡಿದ್ದಾರೆ. ಇದೀಗ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ವತಿಯಿಂದ ಒಂದು ಲಕ್ಷ ರೂ. ಹಣವನ್ನು ಸಹಾಯ ಧನವಾಗಿ ಒದಗಿಸಿದೆ ಎಂದರು.

ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬೈಚನಹಳ್ಳಿ ವಲಯದ ಮೇಲ್ವಿಚಾರಕಿ ಹೇಮಾ, ಸೇವಾ ಪ್ರತಿನಿಧಿ ರಶ್ಮಿ, ಕೊಡಗು ಜಿಲ್ಲಾ ನಿರ್ದೇಶಕಿ ಲೀಲಾವತಿ, ಸಂಸ್ಥೆಯ ತಾಲೂಕು ಯೋಜನಾಧಿಕಾರಿ ಜಿನ್ನಪ್ಪ, ಗ್ರಾಮದ ಶ್ರೀ ವೀರಭದ್ರೇಶ್ವರ ಸೇವಾ ಟ್ರಸ್ಟ್ ಕಾರ್ಯದರ್ಶಿ ಜಗದೀಶ್, ನಿರ್ದೇಶಕರಾದ ದೊಡ್ಡೇಗೌಡ, ವೆಂಕಟೇಶ್, ಆನಂದ್, ಯೋಗರಾಜ್, ನಿಂಗರಾಜ್ ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.