ಜಿಲ್ಲೆ

ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ನಾಳೆ

ಚಾಮರಾಜನಗರ : ಜಿಲ್ಲಾ ದಲಿತ ಸಾಹಿತ್ಯ ಪರಿಷತ್ತು ಮತ್ತು ಪರಿವರ್ತನ ಅಧ್ಯಯನ ಕೇಂದ್ರ ಸಹಯೋಗದಲ್ಲಿ ಜೂ. 4 ರ ಬುಧವಾರ ಸಂಜೆ 4.30 ಗಂಟೆಗೆ ನಗರದ ಪರಿವರ್ತನ ಅಧ್ಯಯನ ಕೇಂದ್ರದ ಸಭಾಂಗಣದಲ್ಲಿ ರಾಜರ್ಷಿ ಶ್ರೀನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ.

ಬಹುಜನ ಕವಿ ಹನಸೋಗೆ ಸೋಮಶೇಖರ್ ಸಮಾರಂಭವನ್ನು ಉದ್ಘಾಟಿಸುವರು. ರಾಜರ್ಷಿ ಶ್ರೀನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಕುರಿತು ಭೋಗಾಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಪಿ.ದೇವರಾಜು ಮಾತನಾಡುವರು. ಚೆಸ್ಕಾಂ ಜೂನಿಯರ್ ಇಂಜಿನಿಯರ್ ಎಸ್.ಸಿದ್ದರಾಜಪ್ಪ ಪುಷ್ಪಾರ್ಚನೆ ನೆರವೇರಿಸಲಿದ್ದಾರೆ.ದಲಿತ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಸಿ.ಎಂ.ನರಸಿಂಹಮೂರ್ತಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.