ಚಿತ್ರದುರ್ಗ: ನಗರದ ಶ್ರೀ ಶಿವಶರಣ ಮಾದಾರ ಚನ್ನಯ್ಯ ಗುರುಪೀಠದ ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಅವರು ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಡಿ.ಲಿಟ್ ಪದವಿಗೆ ಭಾಜನರಾಗಿದ್ದಾರೆ.
ಬೆಂಗಳೂರಿನ ಸರ್.ಪುಟ್ಟಣ್ಣ ಚೆಟ್ಟಿ ಪುರಭವನದಲ್ಲಿ ಜೂ.14 ರಂದು ಬೆಳಗ್ಗೆ 11.30 ಕ್ಕೆ ಏರ್ಪಡಿಸಿರುವ, 10 ಮತ್ತು 11ನೇ ದೀಕ್ಷಾಂತ ಘಟಿಕೋತ್ಸವ ಸಮಾರಂಭದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಶ್ರೀಗಳಿಗೆ ಪದವಿ ಪ್ರದಾನ ಮಾಡಲಿದ್ದಾರೆ. ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್, ಕುಲಪತಿ ಡಾ.ಎಸ್.ಅಹಲ್ಯಾ, ರಾಷ್ಟ್ರಪತಿ ಪ್ರಶಸ್ತಿ ಪುರಸ್ಕೃತ ಸಂಸ್ಕೃತ ವಿದ್ವಾಂಸ ಡಾ.ಎಚ್.ವಿ.ನಾಗರಾಜರಾವ್ ಅವರು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
ಶ್ರೀ ಶಿವಲಿಂಗಾನಂದ ಸ್ವಾಮೀಜಿ,ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ, ಶ್ರೀ ಶಾಂತವೀರ ಸ್ವಾಮೀಜಿ, ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ, ಶ್ರೀ ಪುರುಷೋತ್ತಮಾನಂದಪುರಿ ಸ್ವಾಮೀಜಿ, ಶ್ರೀ ಕೃಷ್ಣ ಯಾದವಾನಂದ ಸ್ವಾಮೀಜಿ, ಶ್ರೀ ಬಸವ ಮಾಚಿದೇವ ಸ್ವಾಮೀಜಿ, ಶ್ರೀ ರೇಣುಕಾನಂದ ಸ್ವಾಮೀಜಿ, ಶ್ರೀ ಅನ್ನದಾನಿ ಭಾರತಿ ಅಪ್ಪಣ್ಣ ಸ್ವಾಮೀಜಿ, ಶ್ರೀ ಬಸವ ಕುಂಬಾರ ಗುಂಡಯ್ಯ ಸ್ವಾಮೀಜಿ, ಶ್ರೀ ಬಸವಪ್ರಸಾದ ಸ್ವಾಮೀಜಿ, ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ, ಶ್ರೀಬಸವ ಮಹಾಲಿಂಗ ಸ್ವಾಮೀಜಿ ಹಾಗೂ ಶ್ರೀ ಸತ್ಯಕ್ಕ ತಾಯಿ ಅವರು, ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಅವರಿಗೆ ಡಿ.ಲಿಟ್ ಸಿಕ್ಕಿರುವುದಕ್ಕೆ ಹರ್ಷ ವ್ಯಕ್ತಪಡಿಸಿದ್ದಾರೆ.