ಬೇಲೂರು ಪಟ್ಟಣ ಸಮೀಪದ ಶ್ರೀ ಶನೈಶ್ಚರಸ್ವಾಮಿ ಬ್ರಹ್ಮ ರಥೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ಶನಿವಾರ ಅದ್ದೂರಿಯಾಗಿ ನೆರವೇರಿತು. 
ಜಿಲ್ಲೆ

ಶ್ರೀ ಶನೈಶ್ಚರಸ್ವಾಮಿ ಬ್ರಹ್ಮರಥೋತ್ಸವ ಅದ್ದೂರಿ

Hassan

ಬೇಲೂರು: ಪಟ್ಟಣ ಸಮೀಪದ ಭಿಷ್ಠಮ್ಮನವರ ಕೆರೆಕೋಡಿ ಮಲ್ಲಾಪುರ ಗ್ರಾಮದ ಶ್ರೀ ಶನೈಶ್ಚರಸ್ವಾಮಿ ಬ್ರಹ್ಮ ರಥೋತ್ಸವವು ಸಾವಿರಾರು ಭಕ್ತರ ಸಮ್ಮುಖದಲ್ಲಿ ಶನಿವಾರ ಅದ್ದೂರಿಯಾಗಿ ನೆರವೇರಿತು.

ಶ್ರೀ ಶನೈಶ್ಚರ ಸ್ವಾಮಿ ರಥೋತ್ಸವದ ಅಂಗವಾಗಿ ಶುಕ್ರವಾರ ಬೆಳಗ್ಗೆಯಿಂದಲೇ ವಿಶೇಷ ಹೋಮ, ಹವನ, ಪೂಜೆ, ಮಹಾಮಂಗಳಾರತಿಯೊಂದಿಗೆ ಚಂದ್ರ ಮಂಡಲೋತ್ಸವ ನಡೆಯಿತು. ಶನಿವಾರ ಮಧ್ಯಾಹ್ನ ಶನೇಶ್ವರಸ್ವಾಮಿ ಉತ್ಸವ ಮೂರ್ತಿಯನ್ನು ವಿವಿಧ ಪುಷ್ಪಗಳಿಂದ ಅಲಂಕರಿಸಿದ್ದ ರಥದಲ್ಲಿ ಕೂರಿಸಲಾಯಿತು. ಬಳಿಕ ಗರುಡ ಪ್ರತ್ಯಕ್ಷವಾಗುತ್ತಿದ್ದಂತೆ ನೆರೆದಿದ್ದ ಸಾವಿರಾರು ಭಕ್ತರ ಸಮ್ಮುಖದಲ್ಲಿ ರಥೋತ್ಸವ ನಡೆಯಿತು.
ರಥ ಸಾಗುತ್ತಿದ್ದಂತೆ ಭಕ್ತರು ಬಾಳೆ ಹಣ್ಣು ಎಸೆದು ಭಕ್ತಿ ಪ್ರದರ್ಶಿಸಿದರು. ರಥೋತ್ಸವಕ್ಕೆ ಆಗಮಿಸಿದ್ದ ಭಕ್ತರಿಗೆ ಶನೇಶ್ಚರಸ್ವಾಮಿ ದೇಗುಲ ಟ್ರಸ್ಟ್‌ನಿಂದ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು. ಶನೈಶ್ಚರಸ್ವಾಮಿ ದೇಗುಲ ಟ್ರಸ್ಟ್ ಅಧ್ಯಕ್ಷ ಬಿ.ಡಿ.ಚಂದ್ರೇಗೌಡ ಹಾಗೂ ಪದಾಧಿಕಾರಿಗಳು ಇದ್ದರು.