ಜಿಲ್ಲೆ

ಶ್ರೀಕಾಂತ ಪೂಜಾರಿ ಬಿಡುಗಡೆಗೆ ಆಗ್ರಹ


ಯಾದಗಿರಿ: ಹುಬ್ಬಳ್ಳಿಯಲ್ಲಿ ಬಂಧನಕ್ಕೊಳಗಾದ ಹಿಂದು ಕಾರ್ಯಕರ್ತ ಶ್ರೀಕಾಂತ ಪೂಜಾರಿ ಬಿಡುಗಡೆಗೆ ಆಗ್ರಹಿಸಿ ಹಾಗೂ ರಾಜ್ಯದಲ್ಲಿ ರಾಮ ಭಕ್ತರ ವಿರುದ್ಧ ನಡೆದಿರುವ ದೌರ್ಜನ್ಯ ಖಂಡಿಸಿ ಜಿಲ್ಲಾ ಬಿಜೆಪಿ ಕಾರ್ಯಕರ್ತರು ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಗುರುವಾರ ಪ್ರತಿಭಟನೆ ನಡೆಸಿದರು.

ಮಾಜಿ ಎಂಎಲ್ಸಿ ಅಮರನಾಥ ಪಾಟೀಲ್ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಗೂಂಡಾ ಪ್ರವೃತ್ತಿ ಹೆಚ್ಚಾಗಿದೆ. ನಿರಂತರ ಕೊಲೆ, ಅತ್ಯಾಚಾರ ಹಾಗೂ ಹಿಂದು ಕಾರ್ಯಕರ್ತರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಲಾಗುತ್ತಿದೆ. ಹುಬ್ಬಳ್ಳಿಯಲ್ಲಿ ಬಂಧಿತ ಶ್ರೀಕಾಂತ ಪೂಜಾರಿಯನ್ನು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದ ಅವರು, ಹಿಂದು ಕಾರ್ಯಕರ್ತರ ಮೇಲೆ ಅನಗತ್ಯ ಸುಳ್ಳು ಪ್ರಕರಣ ದಾಖಲಿಸುವ ಮೂಲಕ ಸಿದ್ದರಾಮಯ್ಯ ಸರಕಾರ ಹಿಂದು ವಿರೋಧಿ ಧೋರಣೆ ಅನುಸರಿಸುತ್ತಿದೆ ಎಂದು ಹರಿಹಾಯ್ದರು.

ಅಯೋಧ್ಯೆಯಲ್ಲಿ ರಾಮಮಂದಿರ ನಿಮರ್ಾಣಗೊಂಡು ಉದ್ಘಾಟನೆಗೊಳ್ಳುತ್ತಿದ್ದು, ದೇಶದ ಜನ ಸಂಭ್ರಮದಲ್ಲಿದ್ದಾರೆ. ಆದರೆ ಈ ಸರಕಾರಕ್ಕೆ ಅರಗಿಸಿಕೊಳ್ಳಲು ಆಗದೆ ಅನಗತ್ಯ ಕಿರುಕುಳ ನೀಡುತ್ತಿದೆ. ರಾಜ್ಯಾದ್ಯಂತ ರಾಮ ಭಕ್ತರ ಮೇಲೆ ನಡೆಸುತ್ತಿರುವ ದೌರ್ಜನ್ಯ ತಕ್ಷಣ ನಿಲ್ಲಿಸಲು ಸಕರ್ಾರ ಅಗತ್ಯ ಕ್ರಮ ಕೈಗೊಳ್ಳಬೇಕು. ಒಂದು ವೇಳೆ ಪೂಜಾರಿಯವರನ್ನು ಬಿಡುಗಡೆ ಮಾಡದಿದ್ದಲ್ಲಿ ಹಾಗೂ ರಾಮ ಭಕ್ತರ ಮೇಲೆ ಪೊಲೀಸ್ ಇಲಾಖೆ ದೌರ್ಜನ್ಯ ನಿಲ್ಲಿಸದಿದ್ದರೆ ಬಿಜೆಪಿ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಿದೆ ಎಂದು ಎಚ್ಚರಿಸಿದರು.