ಬೆಳಗಾವಿ:ಜಿಲ್ಲಾಡಳಿತ, ಜಿಲ್ಲಾ ಪಂಚಾಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಬೆಳಗಾವಿ ಮಹಾನಗರ ಪಾಲಿಕೆ ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ನಿಮಿತ್ತ ಸೆ.6 ರಂದು ಬೆಳಿಗ್ಗೆ 9.30 ಗಂಟೆಗೆ ಕೋಟೆ ಕೆರೆಯಿಂದ ಕುಮಾರ ಗಂಧರ್ವ ಕಲಾಮಂದಿರದವರೆಗೆ ಭಾವಚಿತ್ರದ ಮೆರವಣಿಗೆ ನಡೆಯಲಿದ್ದು, 11 ಗಂಟೆಗೆ ವೇದಿಕೆ ಕಾರ್ಯಕ್ರಮ ಜರುಗಲಿದೆ.
ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರಾದ ಲಕ್ಷ್ಮಿ ಆರ್. ಹೆಬ್ಬಾಳ್ಕರ ಅವರು ಅತಿಥಿಗಳಾಗಿ ಆಗಮಿಸಲಿದ್ದಾರೆ. ಶಾಸಕ ಆಸೀಫ್ ಸೇಠ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ವಿಧಾನಸಭೆ ಮುಖ್ಯ ಸಚೇತಕರಾದ ಅಶೋಕ್ ಪಟ್ಟಣ, ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ-2 ಆದ ಪ್ರಕಾಶ ಹುಕ್ಕೇರಿ, ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತ ಸಂಜಯ ಬಿ. ಶೆಟ್ಟಣ್ಣವರ, ಪೋಲಿಸ್ ಮಹಾನಿರೀಕ್ಷಕರಾದ ವಿಕಾಶ್ ಕುಮಾರ್ ವಿಕಾಶ್ ಅವರು ವಿಶೇಷ ಆಹ್ವಾನಿತರಾಗಿದ್ದಾರೆ. ಬೆಳಗಾವಿಯ ರವಿ ಶಾಸ್ತ್ರಿ ಅವರು ಉಪನ್ಯಾಸ ನೀಡಲಿದ್ದಾರೆ ಹಾಗೂ ಕವಿತಾ ಸುತಾರ ಅವರು ವಚನ ಸಂಗೀತ ಪ್ರಸ್ತುತ ಪಡಿಸಲಿದ್ದಾರೆ.
ಜಿಲ್ಲಾಧಿಕಾರಿ ನಿತೀಶ್ ಕೆ. ಪಾಟೀಲ, ಬೆಳಗಾವಿ ನಗರ ಪೊಲೀಸ್ ಆಯುಕ್ತ ಎಸ್. ಎನ್. ಸಿದ್ದರಾಮಪ್ಪ, ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿ ಸಂಜೀವ ಎಂ. ಪಾಟೀಲ, ಜಿ.ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್ ಭೋಯರ್, ಮಹಾನಗರ ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪ ನಿರ್ದೇಶಕಿ ವಿದ್ಯಾವತಿ ಭಜಂತ್ರಿ ಹಾಗೂ ನಗರದ ಮತ್ತಿತರ ಗಣ್ಯರು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.