ಜಿಲ್ಲೆ

ಶ್ರೀಕ್ಷೇತ್ರ ಹೊಂಬುಜ ಜೈನಮಠದಲ್ಲಿ ಪದ್ಮಾವತಿ ಅಮ್ಮನವರಿಗೆ ದವಸ-ಧಾನ್ಯ ನೈವೇದ್ಯ ಅರ್ಪಣೆ

ರಿಪ್ಪನ್‌ಪೇಟೆ: ಸಮೀಪದ ಶ್ರೀಕ್ಷೇತ್ರ ಹೊಂಬುಜ ಜೈನಮಠದಲ್ಲಿ ನಾಲ್ಕನೇ ಸಂಪತ್ ಶುಕ್ರವಾರದ ಪೂಜೆ ಸಾಂಗವಾಗಿ ನೆರವೇರಿತು. ಭಗವಾನ್ ಶ್ರೀಪಾರ್ಶ್ವನಾಥ ಸ್ವಾಮಿ ಜಿನಾಲಯದಲ್ಲಿ ಧಾರ್ಮಿಕ ವಿಧಿಯಂತೆ ಅಭಿಷೇಕ, ಮಹಾಪೂಜೆ ನೆರವೇರಿಸಲಾಯಿತು. ಬಳಿಕ ಶ್ರೀ ದೇವೇಂದ್ರಕೀರ್ತಿ ಭಟ್ಟಾರಕ ಸ್ವಾಮೀಜಿಗಳ ನೇತೃತ್ವದಲ್ಲಿ ಜಗನ್ಮಾತೆ ಶ್ರೀ ಪದ್ಮಾವತಿ ಅಮ್ಮನವರಿಗೆ ವಿಶೇಷ ಪೂಜೆ ನೆರವೇರಿಸಿ ದವಸ-ಧಾನ್ಯಗಳ ನೈವೇದ್ಯ ಅರ್ಪಿಸಲಾಯಿತು. ಸೋಂದಾ ಜೈನ ಮಠದ ಸ್ವಸ್ತಿಶ್ರೀ ಭಟ್ಟಾಕಲಂಕ ಭಟ್ಟಾರಕ ಸ್ವಾಮೀಜಿ, ವರೂರು ಜೈನ ಮಠದ ಸ್ವಸ್ತಿಶ್ರೀ ಧರ್ಮಸೇನ ಭಟ್ಟಾರಕ ಸ್ವಾಮೀಜಿ ಇದ್ದರು.

ಬೆಳಗಾವಿ ಜಿಲ್ಲೆಯ ಅಥಣಿಯಿಂದ ಹೊಂಬುಜ ಜೈನ ಮಠಕ್ಕೆ ಕಾಲ್ನಡಿಗೆಯಲ್ಲಿ ಬಂದಂತಹ 75 ಜನರ ಭಕ್ತ ತಂಡದವರು ಭೋಜನ ಸೇವೆ ಸಲ್ಲಿಸಿದರು. ತಮಿಳುನಾಡು, ಮಹಾರಾಷ್ಟ್ರ, ರಾಜಸ್ಥಾನ, ಆಂಧ್ರಪ್ರದೇಶ, ರಾಜ್ಯದ ವಿವಿಧ ಜಿಲ್ಲೆಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಭಕ್ತಿಕಾಣಿಕೆ ಸಮರ್ಪಿಸಿದರು. ಸಂಪ್ರದಾಯದಂತೆ ಉಡಿ ಅರ್ಪಿಸಿ ಇಷ್ಟಾರ್ಥ ಸಿದ್ಧಿಗಾಗಿ ಪ್ರಾರ್ಥಿಸಿದರು.