ಜಿಲ್ಲೆ

ಶ್ರೀಗಂಧದ ಮರ ಕದ್ದಿದ್ದ ಇಬ್ಬರ ಬಂಧನ

ಮೈಸೂರು: ಶ್ರೀಗಂಧದ ಮರವನ್ನು ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

ತಮಿಳುನಾಡಿನ ಕೃಷ್ಣಗಿರಿ ನಿವಾಸಿ ಕಿರಣ್ ಹಾಗೂ ಮಂಡ್ಯದ ನಿವಾಸಿ ಸೂರಿ ಬಂಧಿತರು. ದಟ್ಟಗಳ್ಳಿಯ ಮಾರಮ್ಮ ದೇವಾಲಯದ ಬಳಿ ನಿಂತಿದ್ದ ಆರೋಪಿಗಳು ಗಸ್ತಿನಲ್ಲಿದ್ದ ಪೊಲೀಸರನ್ನು ಕಂಡ ಕೂಡಲೇ ಸ್ಥಳದಿಂದ ಓಡಿ ಹೋಗಲು ಯತ್ನಿಸಿದ್ದು, ಕೂಡಲೇ ಪೊಲೀಸರು ಅವರನ್ನು ಬೆನ್ನಟ್ಟಿ ಹಿಡಿದಿದ್ದಾರೆ.

ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿದಾಗ ನಗರದ ಪಂಚಮಂತ್ರ ರಸ್ತೆಯ ಮನೆಯೊಂದರ ಆವರಣದಲ್ಲಿದ್ದ ಗಂಧದ ಮರವನ್ನು ಕಡಿದು ಕಳವು ಮಾಡಿದ್ದಾಗಿ ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕುವೆಂಪುನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.