ಭಾಲ್ಕಿಯಲ್ಲಿ ತಾಲೂಕು ವಚನ ಸಾಹಿತ್ಯ ಪರಿಷತ್ ವತಿಯಿಂದ ಆಯೋಜಿಸಿದ್ದ ಮಾಸಿಕ ಶರಣ ಸಂಗಮ ಕಾರ್ಯಕ್ರಮದಲ್ಲಿ ಸಾಧಕರನ್ನು ಸನ್ಮಾನಿಸಲಾಯಿತು. ಶ್ರೀ ಗುರುಬಸವ ಪಟ್ಟದ್ದೇವರು, ಶಂಭುಲಿಂಗ ಕಾಮಣ್ಣ, ಚಂದ್ರಶೇಖರ ಬನ್ನಾಳೆ, ಗುಂಡಪ್ಪ ಸಂಗಮಕರ್, ಮಲ್ಲಮ್ಮ ಪಾಟೀಲ್, ಸಂತೋಷ ಹಡಪದ ಇದ್ದರು. 
ಜಿಲ್ಲೆ

ಶ್ರೇಷ್ಠ ಬದುಕಿಗೆ ಶರಣರ ವಚನ ಆಧಾರ

ಭಾಲ್ಕಿ: ಮನುಷ್ಯ ಶ್ರೇಷ್ಠ ಬದುಕಿಗೆ ಬಸವಾದಿ ಶರಣರು ರಚಿಸಿರುವ ವಚನಗಳು ಆಧಾರವಾಗಿವೆ ಎಂದು ಹಿರೇಮಠ ಸಂಸ್ಥಾನದ ಪೀಠಾಧಿಪತಿ ಶ್ರೀ ಗುರುಬಸವ ಪಟ್ಟದ್ದೇವರು ನುಡಿದರು.

ಪಟ್ಟಣದದಲ್ಲಿ ತಾಲೂಕು ವಚನ ಸಾಹಿತ್ಯ ಪರಿಷತ್ತು ವತಿಯಿಂದ ಭಾನುವಾರ ಆಯೋಜಿಸಿದ್ದ ಮಾಸಿಕ ಶರಣ ಸಂಗಮ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದ ಶ್ರೀಗಳು, ಕಾಯಕ, ಮಾತು ಮತ್ತು ಮನಸ್ಸು ಶುದ್ಧವಾದರೆ ಶ್ರೇಷ್ಠ ಬದುಕು ಸಾಗಿಸಲು ಸಾಧ್ಯವಾಗುತ್ತದೆ ಎಂದರು.

ಶರಣರು ನಮಗೆ ನೀಡಿದ ವಚನಗಳು ಅನುಸಂಧಾನ ವಚನಗಳು. ಶರಣರ ಅನುಭಾವ ಶ್ರೀಮಂತವಾದುದು. ಅವು ಜೀವನಕ್ಕೆ ಉತ್ತಮ ಸಂದೇಶ ನೀಡುತ್ತವೆ ಎಂದು ತಿಳಿಸಿದರು.

ಕಸಾಪ ರಾಜ್ಯ ಪ್ರತಿನಿಧಿ ಮಲ್ಲಮ್ಮ ಆರ್. ಪಾಟೀಲ್ ಶಿವಯೋಗಿ ಸಿದ್ಧರಾಮೇಶ್ವರರ ಕುರಿತು ಅನುಭಾವ ನೀಡಿದರು. ತಾಲೂಕು ಜಾಗತಿಕ ಲಿಂಗಾಯತ ಮಹಾಸಭೆಯ ಅಧ್ಯಕ್ಷ ಬಸವರಾಜ ಮರೆ ಕಾರ್ಯಕ್ರಮ ಉದ್ಘಾಟಿಸಿದರು. ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಶಂಭುಲಿಂಗ ಕಾಮಣ್ಣ ಮಾತನಾಡಿದರು. ಪುರಸಭೆ ಮಾಜಿ ಸದಸ್ಯ ಮಹಾದೇವ ಸ್ವಾಮಿ ಅಧ್ಯಕ್ಷತೆ ವಹಿಸಿದ್ದರು. ಮಹಾದೇವ ಬೇಲೂರೆ ಷಟಸ್ಥಲ ಧ್ವಜಾರೋಹಣ ನೆರವೇರಿಸಿದರು.

ತಾಲೂಕು ವಚನ ಸಾಹಿತ್ಯ ಪರಿಷತ್ ಅಧ್ಯಕ್ಷ ಗುಂಡಪ್ಪ ಸಂಗಮಕರ್ ಪ್ರಾಸ್ತಾವಿಕ ಮಾತನಾಡಿದರು. ಮಲ್ಲಿಕಾರ್ಜುನ ಡೋಣಗಾಪೂರೆ ಪ್ರಾರ್ಥನೆ ಗೀತೆ ನಡೆಸಿಕೊಟ್ಟರು. ಅನುಪ್ರಿಯ ಯೋಗೇಶ ಹಿರೇಮಠ ಬಸವ ಗುರುವಿನ ಪೂಜೆ ನೆರವೇರಿಸಿದರು.

ಚಂದ್ರಕಾಂತ ಮತ್ತು ದೀಪಕ ಠಮಕೆ ನಿರೂಪಣೆ ಮಾಡಿದರು. ಸಂತೋಷ ಹಡಪದ ವಂದಿಸಿದರು. ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಚಂದ್ರಶೇಖರ ಬನ್ನಾಳೆ ಸೇರಿ ಹಲವರನ್ನು ಸನ್ಮಾನಿಸಲಾಯಿತು.