ಜಿಲ್ಲೆ

ಸಂಗಣ್ಣ ಕರಡಿ ಕಾಂಗ್ರೆಸ್ ಸೇರ್ಪಡೆಯಿಂದ ಹಾನಿಯಿಲ್ಲ

ರಾಯಚೂರು: ಕೊಪ್ಪಳದ ಮಾಜಿ ಸಂಸದ ಸಂಗಣ್ಣ ಕರಡಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿರುವುದರಿಂದ ಪಕ್ಷಕ್ಕೆ ಯಾವುದೇ ಹಾನಿಯಲ್ಲ. ಅವರ ಹಿಂದೆ ಕೆಲವು ಕಾರ್ಯಕರ್ತರು ಹೋಗಬಹುದು. ಜನರ ಬೆಂಬಲ ಪಕ್ಷಕ್ಕಿದೆ ಎಂದು ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಹೇಳಿದರು.
ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆಯಲ್ಲಿ ಭಾಗವಹಿಸಲು ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಗುರುವಾರ ಮಾತನಾಡಿ, ಬಿಜೆಪಿಯಲ್ಲಿ ಯಾವುದೇ ಗೊಂದಲವಿಲ್ಲ. ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ ಗೆಲವು ಸಾಸಲಿದೆ ಎಂದರು.
ದೇಶದಲ್ಲಿ ಪ್ರಧಾನಿ ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸಲು ದೇಶದ ಜನರು ಸಂಕಲ್ಪ ಮಾಡಿದ್ದಾರೆ. ಅದನ್ನು ತಪ್ಪಿಸಲು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ ಎಂದು ಜನಾರ್ದನ ರೆಡ್ಡಿ ಹೇಳಿದರು.