ರಾಯಚೂರಿನ ವೀರಶೈವ ಮಹಾಂತೇಶ ಕಲ್ಯಾಣ ಮಂಟಪದಲ್ಲಿ ಕಲಾ ಸಂಕುಲ ಸಂಸ್ಥೆಯಿಂದ ಸ್ವಾತಂತ್ರೋತ್ಸವ ಅಂಗವಾಗಿ ಮಂಗಳವಾರ ಸಂಜೆ ಏರ್ಪಡಿಸಿದ್ದ ಸಂಗೀತೋತ್ಸವವನ್ನು ಉಡುಪಿಯ ಗಾಯಕಿ ಕಲಾವತಿ ದಯಾನಂದ ಉದ್ಘಾಟಿಸಿದರು. ಜಿಲ್ಲಾ ಶಸಚಿಕಿತ್ಸಕ ಡಾ.ಎನ್.ವಿಜಯಶಂಕರ, ವೀರಶೈವ ಮಹಾಸಭಾ ಜಿಲ್ಲಾಧ್ಯಕ್ಷ ಚಂದ್ರಶೇಖರ ಪಾಟೀಲ್ ಮಿರ್ಜಾಪುರ, ಲಯನ್ಸ್ ಕ್ಲಬ್ ಸೆಂಟ್ರಲ್ ಅಧ್ಯಕ್ಷ ಡಾ.ಶರಣಬಸವ ಜೋಳದಹೆಡಗಿ, ಸಂಸ್ಥೆ ಅಧ್ಯಕ್ಷೆ ರೇಖಾ ಬಡಿಗೇರ, ಕಾರ್ಯದರ್ಶಿ ಮಾರುತಿ ಬಡಿಗೇರ ಇದ್ದರು. 
ಜಿಲ್ಲೆ

ಸಂಗೀತ ಮನುಷ್ಯನಿಗೆ ನೆಮ್ಮದಿ ಕೊಡುತ್ತದೆ

ರಾಯಚೂರು: ಸಂಗೀತಕ್ಕೆ ತನ್ನದೇ ಆದ ಶಕ್ತಿಯಿದ್ದು, ಸಂಗೀತ ಮತ್ತು ಇಂಪಾದ ಗೀತೆಗಳು ಮನುಷ್ಯನಿಗೆ ನೆಮ್ಮದಿ ಮತ್ತು ಉಲ್ಲಾಸವನ್ನು ನೀಡುತ್ತದೆ ಎಮದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಹೇಶ ಪೋತದಾರ್ ತಿಳಿಸಿದರು.
ಸ್ಥಳೀಯ ವೀರಶೈವ ಮಹಾಂತೇಶ ಕಲ್ಯಾಣ ಮಂಟಪದಲ್ಲಿ ಕಲಾ ಸಂಕುಲ ಸಂಸ್ಥೆಯಿಂದ ಸ್ವಾತಂತ್ರೋತ್ಸವ ನಿಮಿತ್ತ ಮಂಗಳವಾರ ಸಂಜೆ ಏರ್ಪಡಿಸಿದ್ದ ಸಂಗೀತೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸಂಗೀತ ಆಲಿಸುವುದರಿಂದ ಒತ್ತಡದ ಬದುಕಿನಿಂದ ಹೊರಬರಬಹುದಾಗಿದೆ ಎಂದರು.
ಸಿ.ಅಶ್ವಥ್ ನಂತರದಲ್ಲಿ ಜಾನಪದ ಹಾಡುಗಳಿಗೆ ಕಲಾವತಿ ದಯಾನಂದ ಜೀವ ತುಂಬುವ ಕೆಲಸ ಮಾಡುತ್ತಿದ್ದು, ಅವರ ಹಾಡುಗಾರಿಕೆಯಲ್ಲಿ ಮಾಂತ್ರಿಕತೆಯಿದೆ. ಅವರ ಹಾಡುಗಳನ್ನು ಕೇಳುವುದೇ ಸಂತಸದ ಕ್ಷಣವಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಸಿರವಾರದ ಎನ್.ಉದಯಕುಮಾರಗೆ ಬಸವ ಪುರಸ್ಕಾರ ಪ್ರದಾನ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆಗೈದವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ನಂತರ ಉಡುಪಿಯ ಕಲಾವತಿ ದಯಾನಂದರಿಂದ ಗಾಯನ ಕಾರ್ಯಕ್ರಮ ಜರುಗಿತು.
ಕಲಾ ಸಂಕುಲ ಸಂಸ್ಥೆ ಅಧ್ಯಕ್ಷೆ ರೇಖಾ ಬಡಿಗೇರ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಜಿಲ್ಲಾ ಶಸಚಿಕಿತ್ಸಕ ಡಾ.ಎನ್.ವಿಜಯಶಂಕರ, ವೀರಶೈವ ಮಹಾಸಭಾ ಜಿಲ್ಲಾಧ್ಯಕ್ಷ ಚಂದ್ರಶೇಖರ ಪಾಟೀಲ್ ಮಿರ್ಜಾಪುರ, ಲಯನ್ಸ್ ಕ್ಲಬ್ ಸೆಂಟ್ರಲ್ ಅಧ್ಯಕ್ಷ ಡಾ.ಶರಣಬಸವ ಜೋಳದಹೆಡಗಿ, ಗುತ್ತಿಗೆದಾರ ರವೀಂದ್ರ ಜಲ್ದಾರ್, ಾತೀಮಾ ಹುಸೇನ್, ಡಾ.ತಾನಾಜಿ ಕಲ್ಯಾಣಕರ್, ಸಂಸ್ಥೆ ಕಾರ್ಯದರ್ಶಿ ಮಾರುತಿ ಬಡಿಗೇರ ಉಪಸ್ಥಿತರಿದ್ದರು.