ಕಲಬುರಗಿ: ಶರಣಬಸವೇಶ್ವರ ವಸತಿ ಪಬ್ಲಿಕ್ ಶಾಲೆಯ ಮಕ್ಕಳಿಂದ ಶನಿವಾರ ಸಂಚಾರಿ ನಿಯಮಗಳ ಕುರಿತು ಬೀದಿ ನಾಟಕದ ಮೂಲಕ ಜಗೃತಿ ಮೂಡಿಸಲಾಯಿತು. ಸಂಚಾರಿ ನಿಯಮ ಉಲ್ಲಂಘನೆಯಿAದ ಪದೇ ಪದೆ ಅಪಘಾತಗಳು ಸಂಭವಿಸುತ್ತಿದ್ದು, ಅಪಘಾತಕ್ಕೆ ಕಾರಣ, ಅದನ್ನು ತಡೆಯಲು ವಹಿಸಬೇಕಾದ ಮುನ್ನೆಚ್ಚರಿಕೆ ಕುರಿತು ನಾಟಕದಲ್ಲಿ ಪ್ರದರ್ಶನ ಮಾಡಲಾಯಿತು. ವಿದ್ಯಾರ್ಥಿಗಳಿಗೆ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಶ್ರೀ ಡಾ.ಶರಣಬಸವಪ್ಪ ಅಪ್ಪ, ಚೇರಪರ್ಸನ್ ಮಾತೋಶ್ರೀ ಡಾ. ದಾಕ್ಷಾಯಣಿ ಅಪ್ಪ, ಶ್ರೀ ದೊಡ್ಡಪ್ಪ ಅಪ್ಪ, ಸಂಸ್ಥೆ ಕಾರ್ಯದರ್ಶಿ ಬಸವರಾಜ ದೇಶಮುಖ, ಪ್ರಾಚಾರ್ಯ ಎನ್.ಎಸ್. ದೇವರಕಲ್ ಶುಭ ಹಾರೈಸಿದರು.