ಚಿಕ್ಕಮಗಳೂರಿನ ಆಜಾದ್ ಪಾರ್ಕ್ ವೃತ್ತದಲ್ಲಿ ಅಂತರಾಷ್ಟಿçÃಯ ಮಹಿಳಾ ದಿನಾಚರಣೆಯ ಅಂಗವಾಗಿ ಏರ್ಪಡಿಸಲಾಗಿದ್ದ ಜಿಲ್ಲಾಮಟ್ಟದ ಗ್ರಾಮೀಣ ಸ್ವ-ಸಹಾಯ ಗುಂಪಿನ ಮಹಿಳೆಯರು ತಯಾರಿಸಿದ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳದಲ್ಲಿ ಡಿಸಿ ಮೀನಾ ನಾಗರಾಜ್, ಜಿಪಂ ಸಿಇಒ ಎಚ್.ಎಸ್.ಕೀರ್ತನಾ, ನಗರಸಭಾಧ್ಯಕ್ಷ ಸುಜಾತ ಶಿವಕುಮಾರ್ ಮತ್ತಿತರರು ವಿವಿಧ ವಸ್ತುಗಳನ್ನು ಖರೀದಿಸಿದರು. 
ಜಿಲ್ಲೆ

ಸಂಜೀವಿನಿ ಸ್ವ-ಸಹಾಯ ಸಂಘಗಳು ತಯಾರಿಸಿರುವ ವಸ್ತುಗಳನ್ನು ಖರೀದಿಸಿ

ಚಿಕ್ಕಮಗಳೂರು: ಜಿಲ್ಲೆಯ ಸಂಜೀವಿನಿ ಸ್ತಿçÃಶಕ್ತಿ ಸ್ವಸಹಾಯ ಸಂಘಗಳು ಉತ್ಪಾದಿಸಿರುವ ವಿವಿಧ ಬಗೆಯ ಆಹಾರ ಪದಾರ್ಥಗಳು ಹಾಗೂ ಕರಕುಶಲ ವಸ್ತುಗಳನ್ನು ಖರೀದಿಸುವ ಮೂಲಕ ಮಹಿಳೆಯರು ಆರ್ಥಿಕವಾಗಿ ಸಬಲರಾಗಲು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಕರೆನೀಡಿದರು.

ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಬುಧವಾರ ಜಿಲ್ಲಾ ಪಂಚಾಯಿತಿ, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ರಾಷ್ಟಿçÃಯ ಗ್ರಾಮೀಣ ಜೀವನೋಪಾಯ ಅಭಿಯಾನ-ಸಂಜೀವಿನಿ ಆಶ್ರಯದಲ್ಲಿ ಅಂತರಾಷ್ಟಿçÃಯ ಮಹಿಳಾ ದಿನಾಚರಣೆಯ ಅಂಗವಾಗಿ ಏರ್ಪಡಿಸಲಾಗಿದ್ದ ಜಿಲ್ಲಾಮಟ್ಟದ ಗ್ರಾಮೀಣ ಸ್ವ-ಸಹಾಯ ಗುಂಪಿನ ಮಹಿಳೆಯರು ತಯಾರಿಸಿದ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳ ಉದ್ಘಾಟಿಸಿ ಮಾತನಾಡಿದರು.

ಸಂಜೀವಿನಿ ಸ್ವ-ಸಹಾಯ ಸಂಘಗಳ ಮಹಿಳೆಯರು ಸ್ವತಃ ಮನೆಯಲ್ಲಿ ತಯಾರಿಸಿರುವ ತಿಂಡಿ ತಿನಿಸು, ವಿವಿಧ ಬಗೆಯ ಚಟ್ನಿಪುಡಿ ಮತ್ತು ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಇಂದಿನಿAದ ನಾಲ್ಕು ದಿನಗಳವರೆಗೆ ನಡೆಯಲಿದೆ. ವಸ್ತುಗಳ ಪ್ರದರ್ಶನಕ್ಕೆ ಬೇರೆ ಬೇರೆ ಮಳಿಗೆಗಳನ್ನು ಸಿದ್ಧಗೊಳಿಸಿz್ದೆÃವೆ. ಇದು ವ್ಯಾಪಾರಕ್ಕೆ ಉತ್ತೇಜನ ನೀಡುವ ಪ್ರಯತ್ನವಾಗಿದೆ ಎಂದರು.

ಸಾರ್ವಜನಿಕರು ಈ ಎಲ್ಲಾ ಮಳಿಗೆಗಳಿಗೆ ಭೇಟಿನೀಡಿ ತಿಂಡಿ ತಿನಿಸುಗಳನ್ನು ಖರೀದಿಸುವ ಮೂಲಕ ಸ್ತಿçÃಶಕ್ತಿ ಸ್ವ-ಸಹಾಯ ಸಂಘಗಳನ್ನು ಪ್ರೋತ್ಸಾಹಿಸಬೇಕು ಎಂದು ಮನವಿ ಮಾಡಿದರು.

ಜಿಪಂ ಸಿಇಒ ಎಚ್.ಎಸ್. ಕೀರ್ತನ ಮಾತನಾಡಿ, ಇಂದಿನಿAದ ಶನಿವಾರದವರೆಗೆ ಸುಮಾರು ವಿವಿಧ ಬಗೆಯ ೭೦ ಆಹಾರ ಮಳಿಗೆಗಳು ಹಾಗೂ ಕರಕುಶಲ ವಸ್ತುಗಳು, ಗುಡಿ ಕೈಗಾರಿಕೆ ವಸ್ತುಗಳ ಮಳಿಗೆಗಳನ್ನು ಪ್ರಾರಂಭಿಸಲಾಗಿದೆ. ಅಡುಗೆ ಸಾಮಾಗ್ರಿ, ಅಲಂಕಾರಿಕ ವಸ್ತುಗಳು, ಬಟ್ಟೆಗಳು ಇಲ್ಲಿ ಮಾರಾಟಕ್ಕೆ ಲಭ್ಯವಿದೆ ಎಂದರು.

ಜಿಲ್ಲೆಯ ಪಾರಂಪರಿಕ ಆಹಾರ ಪದ್ಧತಿಯಾದ ಉಪ್ಪಿನಕಾಯಿ, ಹಪ್ಪಳ ಸೇರಿದಂತೆ ವಿವಿಧ ಆಹಾರ ಉತ್ಪನ್ನಗಳನ್ನು ಮಾರಾಟ ಮಾಡುವ ಮಳಿಗೆಗಳನ್ನು ಆರಂಭಿಸಿದ್ದು ನಾಗರೀಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸ್ತಿçÃಶಕ್ತಿ ಸ್ವ-ಸಹಾಯ ಸಂಘಗಳ ಮಹಿಳೆಯರಿಗೆ ಉತ್ತೇಜನ ನೀಡಿ ಪ್ರೋತ್ಸಾಹಿಸಬೇಕು ಎಂದು ಮನವಿ ಮಾಡಿದರು.

ನಗರಸಭಾಧ್ಯಕ್ಷೆ ಸುಜಾತ ಶಿವಕುಮಾರ್ ಮಾತನಾಡಿ, ಮನೆಯಲ್ಲಿ ತಯಾರಿಸಿದ ವಿವಿಧ ಬಗೆಯ ಆಹಾರದ ವಸ್ತುಗಳು ಹಾಗೂ ಗುಡಿಕೈಗಾರಿಕೆಯ ವಸ್ತುಗಳ ಇಲ್ಲಿ ಪ್ರದರ್ಶನ ಏರ್ಪಡಿಸಿದ್ದು, ಸಾರ್ವಜನಿಕರು ಖರೀದಿಸುವ ಜೊತೆಗೆ ಮಹಿಳೆಯರ ಆರ್ಥಿಕ ಸದೃಢತೆಗೆ ಸಹಕರಿಸಬೇಕು ಎಂದು ವಿನಂತಿಸಿದರು.

ಸರ್ಕಾರದಿAದ ವಿವಿಧ ಯೋಜನೆಗಳಡಿ ಸಿಗುವ ಸೌಲಭ್ಯಗಳನ್ನು ಪಡೆದುಕೊಂಡು ಸ್ತಿçÃಶಕ್ತಿ ಸ್ವಸಹಾಯ ಸಂಘಗಳ ಮಹಿಳೆಯರು ಕುಟುಂಬ ನಿರ್ವಹಣೆಗೆ ಮುಂದಾಗಬೇಕು, ರೊಟ್ಟಿ ತಯಾರಿಕೆ, ಶುಚಿ ರುಚಿಯಾದ ಪುಳಿಯೊಗರೆ, ಖಾದ್ಯ ತೈಲಗಳು, ಖಾದಿ ಮೇಳ, ಲಾವಂಚ ಬೇರಿನ ಟೋಪಿ, ಆಟಿಕೆಗಳು ನೋಡುಗರನ್ನು ಮನಸೂರೆಗೊಳ್ಳುತ್ತಿವೆ ಎಂದರು.

ನಗರಸಭೆ ಆಯುಕ್ತ ಬಿ.ಸಿ. ಬಸವರಾಜ್ ಮಾತನಾಡಿ, ಗ್ರಾಮೀಣ ಪ್ರದೇಶದ ಮಹಿಳೆಯರ ಜೀವನೋಪಾಯಕ್ಕಾಗಿ ಗೃಹಬಳಕೆ ವಸ್ತುಗಳ ಮಾರಾಟ ಮಾಡುವ ಉz್ದÉÃಶದಿಂದ ನಗರದ ಆಜಾದ್ ವೃತ್ತದಲ್ಲಿ ವಿವಿಧ ಬಗೆಯ ೭೦ ಮಳಿಗೆಗಳನ್ನು ಆರಂಭಿಸಲಾಗಿದೆ ಎಂದು ಹೇಳಿದರು.

ಡೇನಲ್ಮ್ ಯೋಜನೆಯಡಿ ಬೀದಿಬದಿ ವ್ಯಾಪಾರಿಗಳಿಗೆ ಪ್ರಾರಂಭದಲ್ಲಿ ೧೦ ಸಾವಿರ ನೀಡುತ್ತಿದ್ದು, ಈಗಾಗಲೇ ೧೬೦೦ ಕ್ಕೂ ಹೆಚ್ಚು ಫಲಾನುಭವಿಗಳಿಗೆ ಸಾಲಸೌಲಭ್ಯ ನೀಡಲಾಗಿದೆ. ಸಮರ್ಪಕವಾಗಿ ಸಾಲ ಮರುಪಾವತಿ ಮಾಡಿದ ೬೦೦ ಕ್ಕೂ ಹೆಚ್ಚು ಫಲಾನುಭವಿಗಳಿಗೆ ೨೦ ಸಾವಿರ ರೂ.ಗಳಂತೆ ಸಾಲ ನೀಡಲಾಗಿದೆ ಎಂದು ವಿವರಿಸಿದರು.

ಸುಮಾರು ೫೦೦ ಜನರಿಗೆ ೫೦ ಸಾವಿರ ರೂ ಸಾಲ ವಿತರಣೆ ಮಾಡಲಾಗಿದ್ದು, ಉತ್ತಮ ವಹಿವಾಟು ನಡೆಸಿ ಸಾಲವನ್ನು ಸಕಾಲಕ್ಕೆ ಮರುಪಾವತಿ ಮಾಡಿದವರಿಗೆ ೧ ಲಕ್ಷ ರೂಗಳಿಂದ ೫ ಲಕ್ಷ ರೂಗಳವರೆಗೆ ಸಾಲಸೌಲಭ್ಯ ದೊರೆಯಲಿದೆ. ಇದನ್ನು ಫಲಾನುಭವಿಗಳು ಸದುಪಯೋಗಪಡಿಸಿಕೊಳ್ಳುವಂತೆ ಕರೆನೀಡಿದರು.

ಕೇಂದ್ರ ಮತ್ತು ರಾಜ್ಯಸರ್ಕಾರದ ವಿವಿಧ ಜನಪರ ಯೋಜನೆಗಳನ್ನು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಸ್ವ-ಸಹಾಯ ಸಂಘಗಳು ಬಳಸಿಕೊಳ್ಳುವ ಮೂಲಕ ಸಹಾಯಧನದ ಪ್ರಯೋಜನವನ್ನು ಪಡೆದುಕೊಂಡು ಸ್ವಾವಲಂಬಿ ಜೀವನ ನಡೆಸಬೇಕೆಂದು ಹೇಳಿದರು.

ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಮಾಹಾಂತೇಶ್‌ಭಜAತ್ರಿ, ಯೋಜನಾ ನಿರ್ದೇಶಕಿ ನಯನ, ಪ್ರಮುಖರಾದ ರಾಜೇಂದ್ರ ಉಪಸ್ಥಿತರಿದ್ದರು.