ಚಿಕ್ಕಮಗಳೂರು: ಕಳೆದ ಎರಡು ವಾರದಿಂದ ನಗರದ ಸಂತೆ ಮಾರುಕಟ್ಟೆ ಸ್ವಚ್ಚತೆ ಹಾಗೂ ವರ್ತಕರಲ್ಲಿ ಜಾಗೃತಿ ಮೂಡಿಸಿದ ಪರಿಣಾಮ ಇಂದು ನಾಗರಿಕರು ಸಂತಸದಿAದ ವ್ಯಾಪಾರ ಮಾಡಲು ಅನುಕೂಲವಾಗಿದೆ ಎಂದು ನಗರಸಭೆ ಆಯುಕ್ತ ಬಿ.ಸಿ. ಬಸವರಾಜ್ ತಿಳಿಸಿದರು.
ನಗರದ ಸಂತೆ ಮಾರುಕಟ್ಟೆಗೆ ಬುಧವಾರ ಭೇಟಿ ನೀಡಿ ಮಾತನಾಡಿದ ಅವರು, ಎಲ್ಲಾ ವರ್ತಕರು ಪ್ರತಿ ವಾರ ಇದೇ ರೀತಿ ವ್ಯಾಪಾರ ವಹಿವಾಟು ನಡೆಸಬೇಕು ಎಂದು ಸೂಚನೆ ನೀಡಿದರು.
ನಗರದಲ್ಲಿ ಪ್ಲಾಸ್ಟಿಕ್ ಸಂಪೂರ್ಣ ನಿಷೇಧ ಮಾಡಿದ್ದು, ಸಂತೆ ಮಾರುಕಟ್ಟೆಯಲ್ಲಿ ಅಲ್ಲಲ್ಲಿ ಪ್ಲಾಸ್ಟಿಕ್‌ನ್ನು ವರ್ತಕರು ಇಟ್ಟುಕೊಂಡು ವ್ಯಾಪಾರ ಮಾಡುತ್ತಿರುವುದು ಕಂಡುಬರುತ್ತಿದೆ. ಗ್ರಾಹಕರು ಬಟ್ಟೆ ಬ್ಯಾಗ್‌ಗಳನ್ನು ತರುವ ಮೂಲಕ ನಗರಸಭೆಯೊಂದಿಗೆ ಸಹಕರಿಸಬೇಕು ಎಂದು ವಿನಂತಿಸಿದರು.
ಶುದ್ಧಗAಗಾ ಕುಡಿಯುವ ನೀರಿನ ಘಟಕ ಹಾಗೂ ಶೌಚಗೃಹ ನಿರ್ಮಿಸಬೇಕೆಂಬ ವರ್ತಕರು ಹಾಗೂ ಸಾರ್ವಜನಿಕರ ಬೇಡಿಕೆಗನುಗುಣವಾಗಿ ಮಾರುಕಟ್ಟೆಯಲ್ಲಿ ಹಾಲಿ ಇರುವುದರ ಜೊತೆಗೆ ಶುದ್ಧಗಂಗಾ ಕುಡಿಯುವ ನೀರಿನ ಘಟಕವನ್ನು ನಗರಸಭೆಯಲ್ಲಿ ಅನುಮೋದನೆ ಪಡೆದು ಇನ್ನೊಂದು ತಿಂಗಳಲ್ಲಿ ನಿರ್ಮಾಣ ಮಾಡುವುದಾಗಿ ಭರವಸೆ ನೀಡಿದರು.
ಬೀದಿಬದಿ ವ್ಯಾಪಾರಿಗಳಿಗೆ ಹಾಗೂ ತಳ್ಳುವ ಗಾಡಿಗಳಲ್ಲಿ ವ್ಯಾಪಾರ ನಡೆಸುತ್ತಿರುವವರ ಅನುಕೂಲಕ್ಕಾಗಿ ಮಯೂರ ಹೋಟೆಲ್ ಹಿಂಭಾಗದ ಕಟ್ಟೆ ನಿರ್ಮಿಸಿದ್ದು, ತಾತ್ಕಾಲಿಕವಾಗಿ ಮಾರುಕಟ್ಟೆ ನಿರ್ಮಾಣ ಮಾಡಲಾಗಿದೆ. ದಿನದ ೨೪ ಗಂಟೆ ಇಲ್ಲಿಯೇ ವ್ಯಾಪಾರ ಮಾಡಬೇಕು ಎಂದು ಸೂಚನೆ ನೀಡಿದರು.
ನಗರಸಭೆ ಸದಸ್ಯೆ ಸಿ.ಎನ್ ಸಲ್ಮಾ ಮಾತನಾಡಿ, ನಗರಸಭೆಯ ನಿರ್ಧಾರದಿಂದಾಗಿ ಸಂತೆ ಮಾರುಕಟ್ಟೆ ಸ್ವಚ್ಚತೆಯಿಂದ ಕೂಡಿದ್ದು, ವರ್ತಕರು ಮತ್ತು ನಾಗರೀಕರು ಇದೇ ರೀತಿ ಸಹಕರಿಸಬೇಕೆಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ ಆರೋಗ್ಯ ನಿರೀಕ್ಷಕರಾದ ಈಶ್ವರ್, ಅಣ್ಣಯ್ಯ ಇತರರು ಉಪಸ್ಥಿತರಿದ್ದರು.