ಕೊಳ್ಳೇಗಾಲದ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ತೆರೆದಿದ್ದ ನೆರೆ ಸಂತ್ರಸ್ತರ ಕಾಳಜಿ ಕೇಂದ್ರಕ್ಕೆ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಡಾ.ದತ್ತೇಶ್ ಕುಮಾರ್ ಮಂಗಳವಾರ ಭೇಟಿ ನೀಡಿ ಜನರ ಆರೋಗ್ಯ ವಿಚಾರಿಸಿದರು.  
ಜಿಲ್ಲೆ

ಸಂತ್ರಸ್ತರ ಆರೋಗ್ಯ ವಿಚಾರಿಸಿದ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ

ಕೊಳ್ಳೇಗಾಲ: ಪಟ್ಟಣದ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ತೆರೆದಿರುವ ನೆರೆ ಸಂತ್ರಸ್ತರ ಕಾಳಜಿ ಕೇಂದ್ರಕ್ಕೆ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಡಾ.ದತ್ತೇಶ್‌ಕುಮಾರ್ ಮಂಗಳವಾರ ಭೇಟಿ ನೀಡಿ ಜನರ ಆರೋಗ್ಯ ವಿಚಾರಿಸಿದರು.


ಮಹಾಮಳೆಯಿಂದ ದೊಡ್ಡರಂಗನಾಥ ಕೆರೆ ಭರ್ತಿಯಾಗಿ ಕೆರೆ ನೀರು ಮಧುವನಹಳ್ಳಿ ಗ್ರಾಮದ ಜಿ.ವಿ.ಗೌಡ ಬಡಾವಣೆಗೆ ನುಗ್ಗಿ ನಿವಾಸಿಗಳ ನೆಮ್ಮದಿ ಕಡೆಸಿತ್ತು. ಬಡಾವಣೆಯಲ್ಲಿರುವ 25ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದ್ದ ಹಿನ್ನೆಲೆಯಲ್ಲಿ 70 ಸಂತ್ರಸ್ತರನ್ನು ಕಾಳಜಿ ಕೇಂದ್ರಕ್ಕೆ ಸ್ಥಳಾಂತರ ಮಾಡಲಾಗಿತ್ತು.


ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿದ ಡಾ.ಎಸ್.ದತ್ತೇಶ್‌ಕುಮಾರ್, ಜನರ ಆರೋಗ್ಯ ವಿಚಾರಿಸಿ ಮನೆಗೆ ನೀರು ನುಗ್ಗಿ ತೊಂದರೆಯಾಗಿರುವುದರ ಬಗ್ಗೆ ಮಾಹಿತಿ ಪಡೆದರು. ನೀರಿನಿಂದ ನಷ್ಟ ಉಂಟಾಗಿದ್ದರೆ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರ ಜತೆ ಚರ್ಚಿಸಿ ಪರಿಹಾರ ಕೊಡಿಸುವ ಭರವಸೆ ನೀಡಿದರು.


ಮಧುವನಹಳ್ಳಿ ಗ್ರಾ.ಪಂ. ಅಧ್ಯಕ್ಷೆ ರೇಣುಕಾ, ಸದಸ್ಯ ಮಲ್ಲೇಶ್, ಮಧುವನಹಳ್ಳಿ ಪ್ರಭಾಕರ್, ವಿಜಯ್‌ಕುಮಾರ್ ಹಾಗೂ ಮುಖಂಡರು ಇದ್ದರು.