ಚಿತ್ರದುರ್ಗ: ರಾಜ್ಯ ಸಚಿವ ಸಂಪುಟ ಮರುರಚನೆ ಕುರಿತಂತೆ ಹೈಕಮಾಂಡ್, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಕೇಳಬೇಕೆಂದು ಜಿಲ್ಲಾ ಉಸ್ತು ವಾರಿ ಸಚಿವ ಡಿ.ಸುಧಾಕರ್ ಹೇಳಿದರು.
ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಸಂಪುಟ ರಚನೆ ಮರು ರಚನೆ ಕುರಿತಂತೆ ಯಾವುದೇ ಚರ್ಚೆಯಾಗಿಲ್ಲ. ನನಗೆ ಯಾವುದೇ ಮಾಹಿತಿ ಇಲ್ಲ. ಹಾಗೇನಾದರೂ ಇದ್ದರೆ ಹೈಕಮಾಂಡ್ ನಿರ್ಧರಿಸುತ್ತದೆ ಎಂದರು.
ರಾಜ್ಯದಲ್ಲಿ ಹೊಂದಾಣಿಕೆ ರಾಜಕಾರಣ ನಡೆಯುತ್ತಿದೆ ಎಂಬ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಹೊಂದಾಣಿಕೆ ರಾಜಕಾರಣ ಎಂದರೆ ಏನೆಂದು ಅವರೇ ವಿವರಿಸಬೇಕು ಎಂದು ಉತ್ತರಿಸಿದರು.
ಸಂಸದ ಗೋವಿಂದ ಎಂ.ಕಾರಜೋಳ ಅವರು ನೀರಾವರಿ ಸಚಿವರು, ಡಿಸಿಎಂ ಆಗಿದ್ದವರು ಅವರಿಗೆ ಭದ್ರಾ ಮೇಲ್ದಂಡೆ ಯೋಜನೆ ಸಂಪೂರ್ಣ ಮಾಹಿತಿ ಇದೆ. ಯೋಜನೆ ತ್ವರಿತ ಅನುಷ್ಠಾನಕ್ಕೆ ಪ್ರತ್ಯೇಕ ಸಚಿವಾಲಯದ ಅಗತ್ಯವಿಲ್ಲ. ಅದಕ್ಕೆಂದೇ ವಿಶ್ವೇಶ್ವರಯ್ಯ ಜಲ ನಿಗಮವನ್ನು ಸ್ಥಾಪಿಸಲಾಗಿದೆ ಎಂದರು.
(ಡಿ.ಸುಧಾಕರ್)