filter: 0; fileterIntensity: 0.000000; filterMask: 0; captureOrientation: 0; shaking: 0.180765; highlight: 0; algolist: 0; multi-frame: 1; brp_mask: 0; brp_del_th: 0.0000,0.0000; brp_del_sen: 0.0000,0.0000; delta:null; module: photo;hw-remosaic: false;touch: (-1.0, -1.0);sceneMode: 8;cct_value: 0;AI_Scene: (-1, -1);aec_lux: 0.0;aec_lux_index: 0;HdrStatus: auto;albedo: ;confidence: ;motionLevel: 0;weatherinfo: null;temperature: 34; 
ಜಿಲ್ಲೆ

ಸಂಭ್ರಮದ ಮಹದೇಶ್ವರ ಸ್ವಾಮಿ ಜಾತ್ರೆ

ಸರಗೂರು: ಬಂಡಿಪುರ ಅಭಯಾರಣ್ಯ ವ್ಯಾಪ್ತಿಯ ಕಾನನದ ಮಧ್ಯದಲ್ಲಿರುವ ಬೇಲದಕುಪ್ಪೆ ಶ್ರೀ ಮಹದೇಶ್ವರ ಸ್ವಾಮಿ ಜಾತ್ರೆ, ಹಾಲರವಿ ಉತ್ಸವ, ಕೊಂಡೋತ್ಸವ ವಿಜೃಂಭಣೆಯಿಂದ ನೆರವೇರಿತು.

ಮೂರು ದಿನಗಳ ಕಾಲ ನಡೆಯುವ ಜಾತ್ರಾ ಮಹೋತ್ಸವದ ಅಂಗವಾಗಿ ದೇವಸ್ಥಾನದ ಸಮೀಪದ ಕೆರೆಯಿಂದ ಹಾಲರವಿ ಸೇವೆ ತೆಗೆದುಕೊಂಡು ದೇವರನ್ನು ದೇವಾಲಯದವರೆಗೂ ತರಲಾಗುವುದು. ರಾತ್ರಿ ಎಣ್ಣೆ ಮಜ್ಜನ ನಂತರ ಕೊಂಡೋತ್ಸವ ನಡೆಯಿತು. ಮಹದೇಶ್ವರ ಸ್ವಾಮಿಗೆ ರುದ್ರಾಭಿಷೇಕ, ಪುಷ್ಪಾಲಂಕಾರ, ಬೆಲ್ಲದಾರತಿ ಮಾಡಲಾಯಿತು. ಬೆಳಗ್ಗೆ 11 ಗಂಟೆ ವೇಳೆಗೆ ಮಹದೇಶ್ವರ ಸ್ವಾಮಿ ಉತ್ಸವ ಮೂರ್ತಿಯೊಂದಿಗೆ ಹೊಳೆ ಮೆಟ್ಟಿಸಲಾಯಿತು. ಅಕ್ಕಪಕ್ಕದ ಗ್ರಾಮಗಳಿಂದ ತೇರುಗಳನ್ನು ಸಿಂಗರಿಸಿ ಮೆರವಣಿಗೆ ನಡೆಸಿ ಮಧ್ಯಾಹ್ನ 12ರ ವೇಳೆಗೆ ಮಹದೇಶ್ವರ ಸ್ವಾಮಿ ದೇವಾಲಯದ ಮುಂಭಾಗದಲ್ಲಿ ಅಗ್ನಿಕೊಂಡ ಪ್ರವೇಶ ಮಾಡಲಾಯಿತು. ಅರ್ಚಕ ಅಗ್ನಿಕೊಂಡ ಪ್ರವೇಶ ಮಾಡುತ್ತಿದ್ದಂತೆ ಭಕ್ತರು ಜಯಘೋಷದೊಂದಿಗೆ ಅಗ್ನಿಕೊಂಡ ಪ್ರವೇಶಿಸಿದರು.

ಚಂಡೆ ಮೇಳ, ತಮಟೆ, ವಿವಿಧ ಜಾನಪದ ಕಲಾತಂಡಗಳು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದವು. ಜಾತ್ರೆ ಅಂಗವಾಗಿ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿತ್ತು. ಸಾರಿಗೆ ಬಸ್ ಕೈಕೊಟ್ಟ ಕಾರಣ ಒಂದು ಗಂಟೆಗಳ ಕಾಲ ಕಾದು ಕುಳಿತ ಭಕ್ತರು ಕಾಲ್ನಡಿಗೆಯಲ್ಲೇ ತೆರಳಿ ದೇವರ ದರ್ಶನ ಪಡೆದರು. ದೇವಾಲಯ ಸಮಿತಿಯಿಂದ ಅನ್ನದಾಸೋಹ ಏರ್ಪಡಿಸಲಾಗಿತ್ತು. ಶಾಸಕ ಅನಿಲ್ ಚಿಕ್ಕಮಾದು ಬೇಲದಕುಪ್ಪೆ ಮಹದೇಶ್ವರ ಸ್ವಾಮಿಯ ದರ್ಶನ ಪಡೆದರು.

ಮೊದಲ ಬಾರಿಗೆ ಕುಂಭಾಭಿಷೇಕ:

ದೇವಾಲಯದ ವಿಮಾನ ಗೋಪುರ, ಕಳಶ ಪ್ರತಿಷ್ಠಾಪನೆ, ಕುಂಭಾಭಿಷೇಕ ಕಾರ್ಯಕ್ರಮಗಳು ಶನಿವಾರ ಜರುಗಿದವು. ಆಲಯ ಪ್ರವೇಶ, ಗಣಪತಿ ಪೂಜೆ, ಹೋಮ-ಹವನ, ರುದ್ರಾಭಿಷೇಕ ಪಾರಾಯಣ, ನೈವೇದ್ಯ ಮಹಾಮಂಗಳಾರತಿ ನಡೆದವು. ಭಾನುವಾರ ನವರತ್ನನ್ಯಾಸ, ವಿಮಾನ ಕಳಸ ಸ್ಥಾಪನೆ, ಪ್ರಾಣಪ್ರತಿಷ್ಠೆ, ಪೂರ್ಣಾಹುತಿ ನಂತರ ಕುಂಭಾಭಿಷೇಕ ನಡೆಯಿತು. ನ.26ಕ್ಕೆ ರುದ್ರಾಕ್ಷಿ ಮಂಟಪ, ಹುಲಿ ವಾಹನ, ನಂದಿ ಧ್ವಜದೊಂದಿಗೆ ರಥೋತ್ಸವ ನೆರವೇರಲಿದೆ.