ಚಿತ್ರದುರ್ಗ: ನೇತಾಜಿ ಸುಭಾಷ್‌ಚಂದ್ರ ಬೋಸ್ ಸೇವಾ ಸಂಸ್ಥೆಯಿಂದ ಜಿಲ್ಲೆಯಲ್ಲಿ ಜ.6 ರಿಂದ ಸಂವಿಧಾನ ಪೀಠಿಕೆ ಭಾವಚಿತ್ರ ಅಳವಡಿಸುವ ಅಭಿಯಾನ ಕೈಗೊಳ್ಳಲಾಗುವುದು ಎಂದು ಸಂಸ್ಥೆ ಅಧ್ಯಕ್ಷ ಸಂಗೊಳ್ಳಿ ಸೋಮಣ್ಣ ಹೇಳಿದರು.
ಸರ್ಕಾರದ ಆದೇಶದಂತೆ ಜಿಲ್ಲೆಯ ಎಲ್ಲ ಸರ್ಕಾರಿ, ಅರೆ ಸರ್ಕಾರಿ ಕಚೇರಿಗಳು ಹಾಗೂ ಸಹಕಾರ ಸಂಘಗಳಲ್ಲಿ ಸಂವಿಧಾನ ಪೀಠಿಕೆ ಚಿತ್ರ ಅಳವಡಿಸಲಾಗುವುದು ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಈಗಾಗಲೇ ರಾಜ್ಯದ 27 ಜಿಲ್ಲೆಗಳಲ್ಲಿ ಸಂವಿಧಾನ ಪೀಠಿಕೆ ಅಳವಡಿಕೆ ಅಭಿಯಾನ ಕೈಗೊಳ್ಳಲಾಗಿದೆ. ಬರುವ ದಿನಗಳಲ್ಲಿ ಉಳಿದ ಜಿಲ್ಲೆಗಳಲ್ಲೂ ಅಭಿಯಾನಕ್ಕೆ ಚಾಲನೆ ನೀಡಲಾಗುವುದು ಎಂದರು. ಸಂಸ್ಥೆ ಕಾರ್ಯದರ್ಶಿ ಸುಜಾತಾನಾಯ್ಕ, ಅರುಣ್‌ಕುಮಾರ್, ಮಂಜುನಾಥ್, ಮಹಮ್ಮದ್ ಸಿದ್ದಿಕ್, ಬಿ.ಎನ್. ಪ್ರಭು ಸುದ್ದಿಗೋಷ್ಠಿಯಲ್ಲಿದ್ದರು.