ಜಿಲ್ಲೆ

ಸಂವಿಧಾನದಲ್ಲಿನ ಅಂಶಗಳನ್ನು ಪಾಲಿಸಿ

ಹನೂರು: ಸಂವಿಧಾನದಲ್ಲಿ ಅಡಕವಾಗಿರುವ ಅಂಶಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು ಎಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮೂರ್ತಿ ತಿಳಿಸಿದರು.


ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ಗುರುವಾರ ಆಯೋಜಿಸಿದ್ದ 74ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ದೇಶವು ಆರ್ಥಿಕ, ಸಾಮಾಜಿಕ, ರಾಜಕೀಯ ಹಾಗೂ ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಲು ಸಂವಿಧಾನದಲ್ಲಿ ಅಡಕವಾಗಿರುವ ಅಂಶಗಳೇ ಪ್ರಮುಖ ಕಾರಣವಾಗಿದ್ದು, ಸ್ವಾವಲಂಬನೆ ಸಾಧಿಸಿದ್ದೇವೆ. ದೇಶ ಸ್ವಾತಂತ್ರ್ಯ ಪಡೆದ ನಂತರ ತನ್ನದೇ ಆದ ಸ್ವಾಯತ್ತತೆ ಪಡೆದುಕೊಂಡಿತು. ಅಂಬೇಡ್ಕರ್ ನೀಡಿದ ಸಂವಿಧಾನದಿಂದ ಗಣತಂತ್ರ ವ್ಯವಸ್ಥೆಯನ್ನು ಅಳವಡಿಸಿಕೊಳ್ಳಲು ಸಾಧ್ಯವಾಯಿತು ಎಂದರು.


ಪಟ್ಟಣದ ಡಾ.ಬಿ.ಆರ್ ಅಂಬೇಡ್ಕರ್ ಪ್ರತಿಮೆಗೆ ಮಾರ್ಲಾಪಣೆ ಮಾಡಲಾಯಿತು. ಪಪಂ ಅಧ್ಯಕ್ಷೆ ಚಂದ್ರಮ್ಮ, ಸದಸ್ಯರಾದ ಮಂಜುಳಾ, ಮಮ್ತಾಜ್ ಬಾನು, ಪುಟ್ಟರಾಜು ಹಾಗೂ ಕಚೇರಿ ನೌಕರರು ಹಾಜರಿದ್ದರು.