ಚಾಮರಾಜನಗರ: ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದ ಸಮಾಜದ ಕಟ್ಟಕಡೆಯ ವ್ಯಕ್ತಿ ಉನ್ನತ ಸ್ಥಾನಮಾನಗಳನ್ನು ಪಡೆಯಲು ಸಾಧ್ಯವಾಗಿದೆ ಎಂದು ಚಾಮರಾಜನಗರ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಮಹದೇವಸ್ವಾಮಿ ಅಭಿಪ್ರಾಯಪಟ್ಟರು.
ನಗರದ ಸಿದ್ಧಾರ್ಥ ಪ್ರಥಮದರ್ಜೆ ಕಾಲೇಜಿನಲ್ಲಿ ಜನಹಿತಾಶಕ್ತಿ ಹೋರಾಟವೇದಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಸೋಮವಾರ ಆಯೋಜಿಸಿದ್ದ ಸಂವಿಧಾನ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಡಾ.ಬಿ.ಆರ್.ಅಂಬೇಡ್ಕರ್ ಅವರು ಭಾರತದ ಅಭಿವೃದ್ದಿಗೆ ಪೂರಕವಾದ ಸುಭದ್ರ ಸಂವಿಧಾನ ರಚನೆಮಾಡಿದ್ದಾರೆ. ಶಾಲಾಕಾಲೇಜಿನ ವಿದ್ಯಾರ್ಥಿಗಳು ವಿದ್ಯಾರ್ಥಿದೆಸೆಯಲ್ಲೇ ಅಂಬೇಡ್ಕರ್ ರಚಿಸಿರುವ ಸಂವಿಧಾನವನ್ನು ಅಧ್ಯಯನ ಮಾಡಬೇಕು. ತಾವು ಇಂದು ಉನ್ನತಮಟ್ಟದ ಹುದ್ದೆಯಲ್ಲಿ ಸೇವೆ ಸಲ್ಲಿಸುತ್ತಿದ್ದೇವೆ ಎಂದರೆ ಅದಕ್ಕೆ ಸಂವಿಧಾನ ಕಾರಣ ಎಂದರು.
ಸಿದ್ದಾರ್ಥ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಸಿ.ರಂಗಸ್ವಾಮಿ ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ್ ಅವರು ಅಚಿಸ9ಇದ ಸಂವಿಧಾನದಿಂದ ಸಮಾಜದ ಎಲ್ಲ ವರ್ಗದವರು ಸಂವಿಧಾನಾತ್ಮಕಸೌಲಭ್ಯಗಳನ್ನು ಪಡೆಯಲು ಸಾಧ್ಯವಾಗಿದೆ ಎಂದರು. ಕಾರ್ಯಕ್ರಮದಲ್ಲಿ
ಜನಹಿತಾಶಕ್ತಿ ಹೋರಾಟವೇದಿಕೆ ಜಿಲ್ಲಾಧ್ಯಕ್ಷ ರಾಮಸಮುದ್ರ ಸುರೇಶ್, ಉಪಾನ್ಯಾಸಕರಾದ ಶಶಿಕಲಾ, ಕುಸುಮ ಹಾಗೂ ಇತರರು ಹಾಜರಿದ್ದರು.