ಭಾಲ್ಕಿ: ವಿದ್ಯಾರ್ಜನೆಗೆ ಪಠ್ಯಪುಸ್ತಕ ಎಷ್ಟು ಮುಖ್ಯವೋ, ದೇಶದ ಆಡಳಿತ ವ್ಯವಸ್ಥೆ ಸುಗಮವಾಗಿ ಸಾಗಲು ಪ್ರತಿಯೊಂದು ದೇಶಕ್ಕೂ ಸಂವಿಧಾನ ಅಷ್ಟೇ ಮುಖ್ಯ ಎಂದು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಗೊ.ರು.ಚನ್ನಬಸಪ್ಪ ಹೇಳಿದರು.
ಕರಡ್ಯಾಳ ಶ್ರೀ ಚನ್ನಬಸವೇಶ್ವರ ಗುರುಕುಲ ಶಿಕ್ಷಣ ಸಮುಚ್ಛಯದಲ್ಲಿ ಶನಿವಾರ ಆಜಾದಿ ಕಾ ಅಮೃತ ಮಹೋತ್ಸವ 2ನೇ ದಿನದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಪ್ರತಿಯೊಬ್ಬರೂ ಸಂವಿಧಾನ ಓದಿ ಅದರಲ್ಲಿನ ವಿಷಯಗಳನ್ನು ತಿಳಿದುಕೊಳ್ಳಬೇಕು. ಹಾಗೆಯೇ ಅದರ ಆಶಯಗಳಿಗೆ ಚ್ಯುತಿ ಬರದಂತೆ ನಡೆದುಕೊಳ್ಳಬೇಕು ಎಂದರು.
ನೀತಿ ನಿರೂಪಕರು ವಿವಾದ ರಹಿತ ವಿಷಯವನ್ನು ಪಠ್ಯದಲ್ಲಿ ಸೇರಿಸಿ ವಿದ್ಯಾಥರ್ಿಗಳ ಅಧ್ಯಯನಕ್ಕೆ ನೀಡಬೇಕು. ಪ್ರಜೆಗಳು ಆಯ್ಕೆ ಮಾಡುವ ಪ್ರತಿನಿಧಿಗಳು, ಸಕರ್ಾರ ಜನರ ಸಮಸ್ಯೆ, ಕಷ್ಟ, ಬೇಡಿಕೆ, ಅವಶ್ಯಕತೆಗಳನ್ನು ಪೂರೈಸುವಲ್ಲಿ ವಿಫಲರಾಗುತ್ತಿರುವುದರಿಂದ ಪ್ರತಿಭಟನೆಗಳು ನಡೆದು ಸಾರ್ವಜನಿಕ ಆಸ್ತಿ-ಪಾಸ್ತಿ ಹಾನಿಗೀಡಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.
ದೇಶಕ್ಕೆ ಸ್ವಾತಂತ್ರೃ ಬಂದಾಗಿನಿಂದ ಇಲ್ಲಿಯವರೆಗೆ ಆದ ತಪ್ಪುಗಳನ್ನು ಸರಿಪಡಿಸಿಕೊಂಡು ರಾಷ್ಟ್ರದ ಸತ್ವಯುತ, ಸತ್ಪ್ರಜೆಗಳಾಗಿ ಬಾಳಬೇಕು. ಮಹನೀಯರ ಸ್ವಾತಂತ್ರೃ ಹೋರಾಟ ವ್ಯರ್ಥವಾಗದಂತೆ ನೋಡಿಕೊಳ್ಳುವ ಗುರುತರ ಜವಾಬ್ದಾರಿ ಇಂದಿನ ಯುವ ಜನಾಂಗದ ಮೇಲಿದೆ. ಪ್ರತಿ ಮನೆಗೆ ಒಬ್ಬ ಸೈನಿಕ ತಯಾರಾಗಬೇಕು ಎಂದು ತಿಳಿಸಿದರು.
ಹಿರೇಮಠದ ಪೀಠಾಧಿಪತಿ ಶ್ರೀ ಗುರುಬಸವ ಪಟ್ಟದ್ದೇವರು, ಸಂಸ್ಥೆಯ ನಿದರ್ೇಶಕ ಶಶಿಧರ ಕೋಸಂಬೆ, ಆಡಳಿತಾಧಿಕಾರಿ ಮೋಹನ ರೆಡ್ಡಿ ಇತರರಿದ್ದರು. ಲಕ್ಷ್ಮಣ ಮೇತ್ರೆ ನಿರೂಪಣೆ ಮಾಡಿದರು. ವಿದ್ಯಾಥರ್ಿಗಳು ಪ್ರಸ್ತುತ ಪಡಿಸಿದ ಸಾಂಸ್ಕೃತಿಕ ಕಾರ್ಯಕ್ರಮಗಳು ಗಮನ ಸೆಳೆದವು.