ಬಾಗಲಕೋಟೆ: ಸಾಮಾಜಿಕ ಸಾಮರಸ್ಯ ಕದಡುತ್ತಿರುವ ಹಾಗೂ ಸಿಎಂ ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲಿ ಹರಿಹಾಯ್ದಿದ್ದ ಬಿಜೆಪಿ ಸಂಸದ ಅನಂತಕುಮಾರ ಹೆಗಡೆ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿ ನಗರದ ಜಿಲ್ಲಾ ಪೊಲೀಸ್ ವರಿಷ್ಠಾಽಕಾರಿ ಕಚೇರಿಯಲ್ಲಿ ಕಾಂಗ್ರೆಸ್ ಜಿಲ್ಲಾ ಸಮಿತಿ ಸೋಮವಾರ ದೂರು ಸಲ್ಲಿಸಿದೆ.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಸ್.ಜಿ.ನಂಜಯ್ಯನಮಠ, ಶಾಸಕರಾದ ಜೆ.ಟಿ.ಪಾಟೀಲ, ಎಚ್.ವೈ.ಮೇಟಿ ನೇತೃತ್ವದಲ್ಲಿ ಹೆಚ್ಚುವರಿ ಎಸ್ಪಿ ಪ್ರಸನ್ನ ದೇಸಾಯಿ ಅವರಿಗೆ ಸಂಸದ ಅನಂತಕುಮಾರ ಹೆಗಡೆ ವಿರುದ್ಧ ದೂರು ನೀಡಲಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಸಂಸದ ಅನಂತಕುಮಾರ ಹೆಗಡೆ ಅವರು ಸಾಮಾಜಿಕ ಸಾಮರಸ್ಯ ಕದಡುವಂತಹ ಹೇಳಿಕೆ ನೀಡುತ್ತಿದ್ದಾರೆ. ಕೋಮು ಗಲಭೆ ಸೃಷ್ಟಿ ಮಾಡುವಂತಹ ಪ್ರಚೋದನಕಾರಿ ಮಾತು ಆಡಿದ್ದಾರೆ. ಅಲ್ಲದೆ ಸಿಎಂ ಸಿದ್ದರಾಮಯ್ಯ ವಿರುದ್ಧ ಅಸಂವಿಧಾನಿಕ ಪದ ಬಳಕೆ ಮಾಡಿದ್ದಾರೆ. ಕೂಡಲೇ ಅವರನ್ನು ಬಂಧಿಸಿ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಮಹಿಳಾ ಘಟಕದ ಜಿಲ್ಲಾಧ್ಯಕ್ಷ ರಕ್ಷಿತಾ ಭರತಕುಮಾರ ಈಟಿ, ಪರಿಶಿಷ್ಟ ವಿಭಾಗದ ಜಿಲ್ಲಾಧ್ಯಕ್ಷ ರಾಜು ಮನ್ನಿಕೇರಿ, ಬಸವರಾಜ ಬದಾಮಿ, ಆನಂದ ಶಿಲ್ಪಿ, ಅನೀಲ ದಡ್ಡಿ ಇತರರು ಇದ್ದರು.