ಜಿಲ್ಲೆ

ಸಂಸದ ಮುನಿಸ್ವಾಮಿ ವಿರುದ್ಧ ಕಾಂಗ್ರೆಸ್ ದೂರು

ಮೈಸೂರು: ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಪ್ರಕರಣ ಕುರಿತ ಪತ್ರಕ್ಕೆ ಸಂಬಂಧಿಸಿದಂತೆ ಶಾಸಕ ತನ್ವೀರ್ ಸೇಠ್ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿರುವ ಆರೋಪದ ಮೇಲೆ ಕೋಲಾರ ಸಂಸದ ಎಸ್.ಮುನಿಸ್ವಾಮಿ ವಿರುದ್ಧ ನಗರ ಕಾಂಗ್ರೆಸ್‌ನಿಂದ ಮಂಗಳವಾರ ಪೊಲೀಸರಿಗೆ ದೂರು ನೀಡಲಾಗಿದೆ.
ಶಿವಮೊಗ್ಗ ಗಲಭೆ ಸೇರಿದಂತೆ ಡಿ.ಜೆ.ಹಳ್ಳಿ ಮತ್ತು ಕೆ.ಜೆ.ಹಳ್ಳಿ ಪ್ರಕರಣದಲ್ಲಿ ವಿದ್ಯಾರ್ಥಿಗಳು ಮತ್ತು ಅಮಾಯಕರು ಇದ್ದು, ವಿಚಾರಣೆ ನಡೆಸಿ ಪ್ರಕರಣದಿಂದ ಕೈಬಿಡುವಂತೆ ತನ್ವೀರ್ ಸೇಠ್ ಅವರು ಗೃಹ ಸಚಿವರಿಗೆ ಪತ್ರ ಬರೆದಿದ್ದರು. ಈ ವಿಚಾರವಾಗಿ ಸಂಸದ ಮುನಿಸ್ವಾಮಿ ಅವರು ಶಾಸಕರ ವಿರುದ್ಧ ಅವಹೇಳನಕಾರಿ, ದ್ವೇಷಪೂರಿತ ಹೇಳಿಕೆ ನೀಡಿದ್ದಾರೆ. ಆದ್ದರಿಂದ ಅವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ನಗರ ಕಾಂಗ್ರೆಸ್ ವಕ್ತಾರ ರಾಜೇಶ್ ಅವರು ಪೊಲೀಸ್ ಕಮೀಷನರ್ ರಮೇಶ್ ಬಾನೋತ್ ಅವರಿಗೆ ದೂರು ಸಲ್ಲಿಸಿದರು.
ಮಾಜಿ ಉಪ ಮೇಯರ್ ಶ್ರೀಧರ್, ನಗರಪಾಲಿಕೆ ಸದಸ್ಯರಾದ ಅಯಾಜ್ ಪಾಷ ಪಂಡು, ಸತ್ಯರಾಜು, ಪ್ರದೀಪ್‌ಚಂದ್ರ, ಕಾಂಗ್ರೆಸ್ ಒಬಿಸಿ ಘಟಕದ ಅಧ್ಯಕ್ಷ ಎನ್.ಆರ್.ನಾಗೇಶ್ ಇತರರು ಇದ್ದರು.