ತೂಬಗೆರೆ: ಮನುಷ್ಯನಿಗೆ ಆರೋಗ್ಯವೇ ಮುಖ್ಯ. ಆರೋಗ್ಯವಿಲ್ಲದೆ ಮನುಷ್ಯ ಜೀವನ ನಡೆಸಲು ಸಾಧ್ಯವಿಲ್ಲ ಎಂದು ತೂಬಗೆರೆ ಗ್ರಾಮ ಪಂಚಾಯಿತಿ ಅಧ್ಯೆ ಮುನಿಲಕ್ಷ$್ಮಮ್ಮ ರಾಮಕೃಷ್ಣ ಹೇಳಿದರು, ದೊಡ್ಡಬಳ್ಳಾಪುರ ತಾಲೂಕು ತೂಬಗೆರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈಟ್ಫೀಲ್ಡ್ ವೈ ದೇಹಿ ಆಸ್ಪತ್ರೆಯಿಂದ ಶನಿವಾರ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು.
ಗ್ರಾಮೀಣ ಜನರು ಹೆಚ್ಚು ಕೃಷಿಯಲ್ಲಿ ತೊಡಗಿರುವುದರಿಂದ ಆರೋಗ್ಯದಲ್ಲಿ ಸಮಸ್ಯೆ ಕಂಡು ಬಂದರೆ ಅವರು ಖಾಸಗಿ ಆಸ್ಪತ್ರೆಗೆ ಹೋಗಿ ಪರೀಸಿಕೊಳ್ಳಲು ಕಷ್ಟವಾಗುತ್ತದೆ. ಹಾಗಾಗಿ ಗ್ರಾಮೀಣ ಭಾಗದಲ್ಲಿ ಉಚಿತವಾಗಿ ಆರೋಗ್ಯ ತಪಾಸಣೆ ಮಾಡುತ್ತಿರುವುದು ಅನುಕೂಲಕರವಾಗಿದೆ ಎಂದರು. ಶಿಬಿರದಲ್ಲಿ ಹೃದ್ರೋಗ, ನರರೋಗ, ಕಿಡ್ನಿಯಲ್ಲಿ ಕಲ್ಲು, ಮೂತ್ರಕೋಶ ಹಾಗೂ ಮೂತ್ರಪಿಂಡಕ್ಕೆ ಸಂಬಂಧಿ ಸಿದ ಸಮಸ್ಯೆಗಳು, ಕ್ಯಾನ್ಸರ್ ಕಾಯಿಲೆ, ಮೂಳೆಶಾಸ್ತ$, ಸ್ತಿ$ ರೋಗ ಹಾಗೂ ಕಿವಿ ಮೂಗು ಗಂಟಲು ತರು ತಪಾಸಣೆ ನಡೆಸಿದರು.