ಜಿಲ್ಲೆ

ಸಕಾಲದಲ್ಲಿ ಸಾಲ ಮರುಪಾವತಿಸಿ

ಶಿಡ್ಲಘಟ್ಟ : ರೈತರು ಹಾಗೂ ಮಹಿಳಾ ಸ್ವ-ಸಹಾಯ ಸಂಘಗಳ ಗುಂಪಿನ ಸದಸ್ಯರು ಪಡೆದಿರುವ ಸಾಲವನ್ನು ಸಕಾಲದಲ್ಲಿ ಮರುಪಾವತಿಸಿ ಬ್ಯಾಂಕಿನ ಪ್ರಗತಿಗೆ ಸಹಕರಿಸಿ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ತಿಳಿಸಿದರು.

ಹಂಡಿಗನಾಳದ ಕೆವಿ ಭವನದಲ್ಲಿ ಬುಧವಾರ ಆಯೋಜಿಸಿದ್ದ ಎಸ್‌ಎಫ್‌ಸಿಎಸ್ ಹಾಗೂ ವಿಎಸ್‌ಎಸ್‌ಎನ್ ಸಂಘಗಳ ಅಧ್ಯಕ್ಷರು, ನಿರ್ದೇಶಕರು ಮತ್ತು ಸಿಇಒಗಳ ಸಭೆಯಲ್ಲಿ ಮಾತನಾಡಿದರು.ಎಸ್‌ಎಫ್‌ಸಿಎಸ್ ಹಾಗೂ ವಿಎಸ್‌ಎಸ್‌ಎನ್ ಸಂಘಗಳ ಸ್ಥಿತಿಗತಿ ಕುರಿತು ಮುಕ್ತವಾಗಿ ಸಂವಾದ ನಡೆಸಿ ಸಂಘಗಳು ಮತ್ತು ಬ್ಯಾಂಕ್‌ಗಳನ್ನು ಸಕ್ರಿಯಗೊಳಿಸಿ ಅದರ ಮೂಲಕ ಬಡವರಿಗೆ ಸಾಲಸೌಲಭ್ಯ ಒದಗಿಸಲು ಆಂದೋಲನ ನಡೆಸಬೇಕೆಂದು ಮನವಿ ಮಾಡಿದರು.

ಶಾಸಕ ವಿ.ಮುನಿಯಪ್ಪ, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಎ.ನಾಗರಾಜ್ ಕೋಚಿಮುಲ್ ಮಾಜಿ ಅಧ್ಯಕ್ಷ ಕೆ.ಗುಡಿಯಪ್ಪ, ಜಿಪಂ ಮಾಜಿ ಅಧ್ಯಕ್ಷ ವಿ.ಸುಬ್ರಮಣಿ, ಜಂಗಮಕೋಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಎಂ.ಮುನಿಯಪ್ಪ, ಮುಖಂಡರಾದ ಕೆ.ಎಂ.ವೆಂಕಟೇಶ್, ಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ಆನಂದ್, ಮೇಲ್ವಿಚಾರಕ ಶ್ರೀನಾಥ್ ಹಾಗೂ ಎಸ್‌ಎಫ್‌ಸಿಎಸ್ ಹಾಗೂ ವಿಎಸ್‌ಎಸ್‌ಎನ್ ಸಂಘಗಳ ಅಧ್ಯಕ್ಷರು, ನಿರ್ದೇಶಕರು, ಸಿಇಒಗಳು ಇದ್ದರು.