ಕೆಎಲ್‌ಇ ಸಂಸ್ಥೆ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ, ವಿಧಾನಪರಿಷತ್ ಸರ್ಕಾರದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ನವದೆಹಲಿಯಲ್ಲಿ ಕೇಂದ್ರ ಪಿಯುಶ್ ಗೋಯಲ್ ಅವರಿಗೆ ಮನವಿ ಸಲ್ಲಿಸಿದರು. 
ಜಿಲ್ಲೆ

ಸಕ್ಕರೆ ಕಾರ್ಖಾನೆಗಳ ಪುನಃಶ್ಚೇತನಕ್ಕೆ ಮನವಿ

ಚಿಕ್ಕೋಡಿ: ಸಕ್ಕರೆ ಉದ್ಯಮ ನಷ್ಟದಲ್ಲಿ ಸಾಗಿದೆ. ಅದರಲ್ಲೂ ಸಹಕಾರಿ ಸಕ್ಕರೆ ಕಾರ್ಖಾನೆಗಳು ಆರ್ಥಿಕ ಮುಗ್ಗಟ್ಟು ಎದುರಿಸುತ್ತಿವೆ. ಇವುಗಳ ಪುನಃಶ್ಚೇತನಕ್ಕೆ ಪ್ರೋತ್ಸಾಹಿಸಬೇಕು ಎಂದು ಕೆಎಲ್‌ಇ ಸಂಸ್ಥೆ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ ಹಾಗೂ ವಿಧಾನಪರಿಷತ್ ಆಡಳಿತ ಪಕ್ಷದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಅವರು ನವದೆಹಲಿಯಲ್ಲಿ ಕೇಂದ್ರದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಪಿಯುಶ್ ಗೋಯಲ್ ಅವರಿಗೆ ಈಚೆಗೆ ಮನವಿ ಸಲ್ಲಿಸಿದರು.

ಇತ್ತೀಚಿನ ದಿನಗಳಲ್ಲಿ ಅನಿಯಂತ್ರಿತ ಸಕ್ಕರೆ ಮಾರುಕಟ್ಟೆ ಹಾಗೂ ಇತರ ಸಮಸ್ಯೆಗಳ ಕಾರಣ ಸಕ್ಕರೆ ಉದ್ಯಮ ನಷ್ಟದಲ್ಲಿ ಸಾಗಿದೆ.

ಪುನಃಶ್ಚೇತನಕ್ಕೆ ಕ್ರಮ ಕೈಗೊಳ್ಳಬೇಕು ಹಾಗೂ ಭಾರತದಲ್ಲಿ ಕಚ್ಚಾತೈಲ ಆಮದು ನಿಯಂತ್ರಿಸಲು ಎಲ್ಲ ಸಹಕಾರಿ ಸಕ್ಕರೆ ಘಟಕಗಳಿಗೆ ಇಥೆನಾಲ್ ಘಟಕ ಪ್ರಾರಂಭಿಸಲು ಪ್ರೋತ್ಸಾಹಿಸಬೇಕು ಎಂದು ಮನವಿ ಮೂಲಕ ಒತ್ತಾಯಿಸಿದರು. ಮನವಿ ಸ್ವೀಕರಿಸಿದ ಸಚಿವರು, ಮುಂಬರುವ ದಿನಗಳಲ್ಲಿ ಈ ಬಗ್ಗೆ ಯೋಗ್ಯ ಕ್ರಮ ಕೈಕೊಳ್ಳಲಾಗುವುದು ಎಂದು ಭರವಸೆ ನೀಡಿದರು.