ಜಿಲ್ಲೆ

ಸಚಿವ ಈಶ್ವರ ಖಂಡ್ರೆಗೆ ಸನ್ಮಾನ

ರೇವಣಸಿದ್ದಪ್ಪ ಪಾಟೀಲ್

ಬೀದರ್: ನೂತನ ಸಚಿವ ಈಶ್ವರ ಖಂಡ್ರೆ ಅವರಿಗೆ ಕಾಂಗ್ರೆಸ್ ಜಿಲ್ಲಾ ಘಟಕದ ಪದಾಧಿಕಾರಿಗಳು ಬೆಂಗಳೂರಿನಲ್ಲಿ ಶಾಲು ಹೊದಿಸಿ ಸನ್ಮಾನಿಸಿದರು.
ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿಗಳಾದ ದತ್ತಾತ್ರಿ ಮೂಲಗೆ ಹಾಗೂ ಮಲ್ಲಿಕಾರ್ಜುನ ಪಾಟೀಲ ಅವರು ಶಾಲು ಹೊದಿಸಿ, ಪೇಟ ತೊಡಿಸಿ ಸತ್ಕರಿಸಿದರು.
ಈಶ್ವರ ಖಂಡ್ರೆ ಅವರು ಹಿಂದೆ ಪೌರಾಡಳಿತ ಸಚಿವರಾಗಿ ರಾಜ್ಯದಲ್ಲಿ ವಿವಿಧ ಯೋಜನೆಗಳ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಈ ಬಾರಿಯೂ ಜಿಲ್ಲೆ ಹಾಗೂ ರಾಜ್ಯದಲ್ಲಿ ಹಲವಾರು ಜನ ಪರ ಕಾರ್ಯಗಳನ್ನು ಕೈಗೊಳ್ಳಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.