ಮೈಸೂರು: ಜಿಲ್ಲಾ ಉಸ್ತುವಾರಿ ಹಾಗೂ ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರ ಕಚೇರಿಯನ್ನು ಸಿದ್ದಾರ್ಥ ಬಡಾವಣೆಯ ನೂತನ ಜಿಲ್ಲಾಧಿಕಾರಿ ಕಚೇರಿಯಲ್ಲಿ ತೆರೆಯಲಾಗಿದ್ದು, ಮಂಗಳವಾರ ಚಾಲನೆ ನೀಡಲಾಯಿತು.
ಸಾರ್ವಜನಿಕರ ಅನುಕೂಲಕ್ಕಾಗಿ ಕಚೇರಿ ಆರಂಭಿಸಿದ್ದು, ತಮ್ಮ ಸಮಸ್ಯೆಗಳಿದ್ದಲ್ಲಿ ಕಚೇರಿ ಸಂಪರ್ಕಿಸಿ ಅರ್ಜಿ ಸಲ್ಲಿಸಬಹುದು ಎಂದು ಕಚೇರಿ ಉದ್ಘಾಟನೆ ಬಳಿಕ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದರು.
ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ನಗರ ಪೊಲೀಸ್ ಕಮೀಷನರ್ ಬಿ.ರಮೇಶ್ ಬಾನೋತ್, ಡಿಸಿಪಿ ಮುತ್ತುರಾಜು ಇತರರಿದ್ದರು.
ನಾನು ಆರೋಗ್ಯವಾಗಿದ್ದೇನೆ:
ನನ್ನ ಆರೋಗ್ಯ ಸ್ಥಿರವಾಗಿದ್ದು, ಆರೋಗ್ಯವಾಗಿದ್ದೇನೆ. ಯಾರೂ ಭಯಪಡುವ ಅಗತ್ಯವಿಲ್ಲ ಎಂದು ಸಚಿವ ಡಾ.ಎಚ್.ಸಿ.ಮಹದೇವಪ್ಪ ಪ್ರತಿಕ್ರಿಯಿಸಿದರು.
ಸ್ವಾತಂತ್ರೃ ದಿನಾಚರಣೆ ಸಮಾರಂಭದಲ್ಲಿ ಭಾಷಣ ಮಾಡುವ ವೇಳೆ ಬಿಸಿಲು ಹೆಚ್ಚಾಗಿದ್ದರಿಂದ ತಲೆ ತಿರುಗಿದಂತಾಗಿ ಕಣ್ಣು ಮಂಜಾಯಿತು. ನೀರು ಕುಡಿದು ಸುಧಾರಿಸಿಕೊಂಡ ನಂತರ ಸರಿಯಾಯಿತು. ನನಗೆ ಬಿಪಿ, ಶುಗರ್ ಇಲ್ಲ, ನನ್ನ ಆರೋಗ್ಯ ಸ್ಥಿರವಾಗಿದೆ. ತಪಾಸಣೆಗೆ ಒಳಗಾಗುವ ಅವಶ್ಯಕತೆ ಇಲ್ಲ. ನಾನು ಚೆನ್ನಾಗಿದ್ದೇನೆ ಎಂದರು.