ಜಿಲ್ಲೆ

ಸಚಿವರ ಬದಲಾವಣೆ ಕಪೋಲಕಲ್ಪಿತ

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ:

ರಾಜ್ಯ ಸಚಿವ ಸಂಪುಟದಿಂದ ಏಳು ಸಚಿವರನ್ನು ಬದಲಾವಣೆ ಮಾಡುತ್ತಾರೆ ಎಂಬುದು ನನಗೆ ಗೊತ್ತಿಲ್ಲ. ಸಚಿವರ ಬದಲಾವಣೆ ಬಗ್ಗೆ ಚರ್ಚೆ ನಡೆಸುವುದು ಅನಾವಶ್ಯಕ. ಅದೆಲ್ಲ ಕಪೋಲಕಲ್ಪಿತ ವಿಚಾರ ಎಂದು ಕಾನೂನು ಮತ್ತು ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ ಹೇಳಿದರು.

ಹುಬ್ಬಳ್ಳಿಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಚುನಾವಣೆಯೂ ತನ್ನ ನೇತೃತ್ವದಲ್ಲಿಯೇ ನಡೆಯುತ್ತದೆ ಎಂಬ ಕೆಪಿಸಿಸಿ ಅಧ್ಯಕ್ಷರ ಹೇಳಿಕೆಗೆ ನಾನು ಪ್ರತಿಕ್ರಿಯಿಸುವುದಿಲ್ಲ ಎಂದರು.

ಅನುದಾನ ಹಂಚಿಕೆಯಲ್ಲಿ ರಾಜ್ಯಕ್ಕೆ ಸಲ್ಲಬೇಕಾದ ಪಾಲನ್ನು ಕೇಂದ್ರ ಸರ್ಕಾರ ಕೊಡುತ್ತಿಲ್ಲ. ಹಾಗಾಗಿ ಈ ಬಾರಿಯ ಬಜೆಟ್ ವಿಚಾರದಲ್ಲಿ ಸಾಕಷ್ಟು ಕಠಿಣ ಪರಿಸ್ಥಿತಿ ಎದುರಿಸುತ್ತಿದ್ದೇವೆ. ಈ ಬಜೆಟ್ ಅತ್ಯಂತ ಮಹತ್ವದ ಬಜೆಟ್. ಸಿಎಂ ಸಿದ್ದರಾಮಯ್ಯ ಚಾಣಾಕ್ಷತನದಿಂದ ಬಜೆಟ್ ಮಂಡಿಸುತ್ತಾರೆ. ಎಲ್ಲರಿಗೂ ನ್ಯಾಯ ಕೊಡಿಸುತ್ತಾರೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.