ಜಿಲ್ಲೆ

ಸಚಿವರ ವಿರುದ್ಧದ ಆರೋಪಕ್ಕೆ ಅರ್ಥವಿಲ್ಲ

ಚಿತ್ರದುರ್ಗ: ಗುತ್ತಿಗೆದಾರ ಸಚಿನ್‌ಪಾಂಚಾಳ ಆತ್ಮಹತ್ಯೆಗೆ ಸಚಿವ ಪ್ರಿಯಾಂಕ್‌ಖರ್ಗೆ ಕಾರಣವೆಂಬ ಬಿಜೆಪಿ ಆಪಾದನೆಗೆ ಅರ್ಥವಿಲ್ಲ ಎಂದು ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಎಸ್. ಜಯಣ್ಣ ಹೇಳಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ತಪ್ಪು ಹುಡುಕುವುದರಲ್ಲಿಯೇ ಕಾಲ ಕಳೆಯುತ್ತಿರುವ ಬಿಜೆಪಿ ನಾಯಕರಿಗೆ ಅಭಿವೃದ್ಧಿ ಬೇಕಾಗಿಲ್ಲ. ಸಿದ್ದರಾಮಯ್ಯ ಯಾವಾಗ ಅಧಿಕಾರದಿಂದ ಕೆಳಗಿಳಿಯುತ್ತಾರೋ ಎಂದು ಹೊಂಚು ಹಾಕುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, ಪ್ರಿಯಾಂಕ್ ಖರ್ಗೆ ವಿರುದ್ಧ ವಿನಾಕಾರಣ ಅಪ ಪ್ರಚಾರ ಮಾಡುವುದು ಸರಿಯಲ್ಲವೆಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.