ಜಿಲ್ಲೆ

ಸಚಿವರು-ಶಾಸಕರಿಗೆ ಸನ್ಮಾನ ನಾಳೆ  - ಕಾಂಗ್ರೆಸ್ ಘಟಕಗಳ ಒಕ್ಕೂಟದಿಂದ ಆಯೋಜನೆ

ದಾವಣಗೆರೆ: ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಸಮಿತಿಯ ಮುಂಚೂಣಿ ಘಟಕಗಳ ಒಕ್ಕೂಟದಿಂದ ನಗರದ ಅಭಿನವ ರೇಣುಕ ಮಂದಿರದಲ್ಲಿ ಜು.23ರಂದು ಬೆಳಗ್ಗೆ 11-30ಕ್ಕೆ ನೂತನ ಸಚಿವರು, ಶಾಸಕರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಕಾಂಗ್ರೆಸ್‌ನ ಎಲ್ಲ 18 ಘಟಕಗಳ ವತಿಯಿಂದ ಸಾಮೂಹಿಕವಾಗಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಬಿ.ಎಚ್.ವೀರಭದ್ರಪ್ಪ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ, ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ, ವಸತಿ ಸಚಿವ ಜಮೀರ್ ಅಹ್ಮದ್, ತೋಟಗಾರಿಕೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ಮಾಜಿ ಸಚಿವ ಎಚ್.ಆಂಜನೇಯ, ಶಾಸಕರಾದ ಡಾ.ಶಾಮನೂರು ಶಿವಶಂಕರಪ್ಪ, ಡಿ.ಜಿ.ಶಾಂತನಗೌಡ, ಬಿ.ದೇವೇಂದ್ರಪ್ಪ, ಕೆ.ಎಸ್.ಬಸವಂತಪ್ಪ, ಶಿವಗಂಗಾ ಬಸವರಾಜ್, ಎಂಎಲ್ಸಿ ಅಬ್ದುಲ್ ಜಬ್ಬಾರ್, ಸೈಯದ್ ಸೈಫುಲ್ಲಾ, ಮೇಯರ್ ವಿನಾಯಕ ಪೈಲ್ವಾನ್, ಮಾಜಿ ಶಾಸಕ ಎಸ್.ರಾಮಪ್ಪ ಇತರರು ಪಾಲ್ಗೊಳ್ಳುವರು ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಅನಿತಾಬಾಯಿ ಮಾಲತೇಶ್, ಸುಭಾನ್‌ಸಾಬ್, ಎಸ್.ನಂಜಾನಾಯ್ಕ, ಡೋಲಿ ಚಂದ್ರು, ಕೆ.ಎಂ.ಮಂಜುನಾಥ್, ಗುರುಮೂರ್ತಿ, ಲಿಯಾಕತ್ ಅಲಿ ಇತರರಿದ್ದರು.

----