filter: 0; fileterIntensity: 0.0; filterMask: 0; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (0.4836511, 0.42558026);sceneMode: 8;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 44; 
ಜಿಲ್ಲೆ

ಸಚಿವೆ ಲಕ್ಷ್ಮಿಹೆಬ್ಬಾಳ್ಕರ್ ಅಭಿಮಾನಿಗಳಿಂದ ಪ್ರತಿಭಟನೆ

ಚಿತ್ರದುರ್ಗ: ಸಚಿವೆ ಲಕ್ಷ್ಮೀಹೆಬ್ಬಾಳ್ಕರ್ ವಿರುದ್ಧ ಅಸಾಂವಿಧಾನಿಕ ಮಾತುಗಳನ್ನಾಡಿರುವ ಎಂಎಲ್‌ಸಿ ಸಿ.ಟಿ. ರವಿ ವಿರುದ್ಧ ಸಚಿವೆಯ ಅಭಿಮಾನಿಗಳು ಡಿಸಿ ಕಚೇರಿ ಬಳಿ ಶನಿವಾರ ಪ್ರತಿಭಟನೆ ನಡೆಸಿದರು.

ಪಟ್ಟಣದ ಪ್ರವಾಸಿ ಮಂದಿರದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ಸಿ.ಟಿ.ರವಿ ವಿರುದ್ಧ ಘೋಷಣೆಗಳನ್ನು ಕೂಗಿದರು.

ಬೆಳಗಾವಿ ಅಧಿವೇಶನದಲ್ಲಿ ರವಿ ಆಡಿರುವ ಮಾತು, ಲಕ್ಷ್ಮೀ ಹೆಬ್ಬಾಳ್ಕರ್ ಮನಸ್ಸಿಗೆ ಘಾಸಿಯುಂಟು ಮಾಡಿದೆ. ಆದ್ದರಿಂದ ರವಿ ಅವರನ್ನು ವಿಧಾನ ಪರಿಷತ್ ಸದಸ್ಯ ಸ್ಥಾನದಿಂದ ವಜಾಗೊಳಿಸಿ ಜೈಲಿಗೆ ಕಳಿಸಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಪ್ರತಿಭಟನೆ ನೇತೃತ್ವ ವಹಿಸಿದ್ದ ಸಂಘದ ಅಧ್ಯಕ್ಷ ಎಚ್.ಎಂ. ಮಂಜುನಾಥ್ ದಾಳಿಂಬೆ ಮಾತನಾಡಿ, ಕೇಂದ್ರ ಗೃಹ ಸಚಿವ ಅಮಿತ್‌ಷಾ ಅವರು ಡಾ.ಬಿ.ಆರ್. ಅಂಬೇಡ್ಕರ್ ಅವರನ್ನು ಅವಮಾನಿಸಿರುವ ಬೆನ್ನಲ್ಲೇ ರವಿ ಅಸಭ್ಯ ಮಾತುಗಳನ್ನಾಡಿದ್ದಾರೆ. ಇವರಿಬ್ಬರೂ ಕೂಡಲೇ ರಾಜಿನಾಮೆ ನೀಡಬೇಕೆಂದು ಒತ್ತಾಯಿಸಿದರು.

ಜಿಲ್ಲಾ ಕರವೇ ಅಧ್ಯಕ್ಷ ರಮೇಶ್, ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಶ್ರೀರಾಮ್, ಹನೀಸ್, ಕಾರ್ತಿಕ್, ಮೋಕ್ಷರುದ್ರಸ್ವಾಮಿ, ಮುನಿರಾ ಎ. ಮಕಾಂದಾರ್, ವಿಜಯಕುಮಾರ್, ನೇತ್ರಾವತಿ, ಕುಮಾರ್, ಗಿರೀಶ್, ಜಗದೀಶ್, ದರ್ಶನ್, ಸುನೀತಾ, ಶಿವರಾಜ್‌ಜಾಲಿಕಟ್ಟೆ, ವನಜಾಕ್ಷಿ, ಮೋನಿಕಾ, ಆಶಾ, ಸೈಯದ್‌ಖುದ್ದೂಸ್, ಪ್ರಕಾಶ್‌ರಾಮನಾಯ್ಕ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.