ಜಿಲ್ಲೆ

ಸಚಿವೆ ಲಕ್ಷ್ಮೀಹೆಬ್ಬಾಳ್ಕರ್ ಪ್ರವಾಸ

ಚಿತ್ರದುರ್ಗ: ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೆ.2 ರಂದು ಚಿತ್ರದುರ್ಗಕ್ಕೆ ಭೇಟಿ ನೀಡಲಿದ್ದಾರೆ. ಅಂದು ಬೆಳಗ್ಗೆ 10.30 ಕ್ಕೆ ನಗರಕ್ಕೆ ಆಗಮಿಸಿ, 11 ಗಂಟೆಗೆ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡುವರು. ಮಧ್ಯಾಹ್ನ 12 ಗಂಟೆಗೆ ಜಿಪಂ ಸಭಾಂಗಣದಲ್ಲಿ ಪ್ರಗತಿ ಪರಿಶೀಲನೆ ಸಭೆ ನಡೆಸಿ, ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸುವರು. ಮಧ್ಯಾಹ್ನ 3.30 ಕ್ಕೆ ಬಾಲಕರ ಮತ್ತು ಬಾಲಕಿಯರ ಸರ್ಕಾರಿ ಬಾಲಮಂದಿರಗಳಿಗೆ ಹಾಗೂ ಸಂಜೆ 4.30 ಕ್ಕೆ ಕಬೀರಾನಂದ ಆಶ್ರಮದ ವೃದ್ಧಾಶ್ರಮಕ್ಕೆ ಭೇಟಿ ನೀಡಲಿದ್ದಾರೆ.