ಜಿಲ್ಲೆ

ಸಣ್ಣ ಕೈಗಾರಿಕೆಯಿಂದ ಆರ್ಥಿಕಕತೆ ವೃದ್ಧಿ

ಯಾದಗಿರಿ: ಸಣ್ಣ ಕೈಗಾರಿಕೆಗಳ ಸ್ಥಾಪನೆಯಿಂದ ಆರ್ಥಿಕ ವೃದ್ಧಿ ಜತೆಗೆ ಉದ್ಯೋಗ ಸೃಷ್ಟಿಗೂ ನೆರವಾಗುತ್ತದೆ ಎಂದು ಜಿ¯್ಲÁ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಹೇಳಿದರು.

ನಗರದಲ್ಲಿ ಮಂಗಳವಾರ ಎಂಎಸ್‌ಎAಇಗಳ ಕಾರ್ಯP್ಷÀಮತೆ ಹೆಚ್ಚಿಸುವುದು ಮತ್ತು ವೇಗಗೊಳಿಸುವ ಯೋಜನೆಯಡಿ ಲೀನ್ ಯೋಜನೆ ಮತ್ತು ಝಡ್ ಇಡಿ ಹಾಗೂ ರಫ್ತು ಕುರಿತು ಹಮ್ಮಿಕೊಂಡ ಒಂದು ದಿನದ ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ದೇಶದಲ್ಲಿ ಸಣ್ಣ ಕೈಗಾರಿಕೆಗಳ ಸ್ಥಾಪನೆಗೆ ಉತ್ತೇಜನ ನೀಡಿದಲ್ಲಿ ಆರ್ಥಿಕ ವೃದ್ಧಿ ಜತೆಗೆ ಹೆಚ್ಚಿನ ಉದ್ಯೋಗಾವಕಾಶ ಸೃಷ್ಟಿಸಲು ಸಾಧ್ಯವಿದೆ. ಈ ದಿಸೆಯಲ್ಲಿ ರಾಜ್ಯದ ಸಣ್ಣ ಉದ್ದಿಮೆದಾರರನ್ನು ತೊಂದರೆ ಮುಕ್ತಗೊಳಿಸಲು ರಾಜ್ಯ ಸರ್ಕಾರ ವಿಶೇಷ ಗಮನ ನೀಡುತ್ತಿದೆ ಎಂದು ಹೇಳಿದರು.

ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಕಾಸಿಯಾದ ವಾರ್ಷಿಕೋತ್ಸವ ಸಮಾರಂಭದಲ್ಲಿ ಎಂಎಸ್‌ಎಮï‌ಇ ಪ್ರತ್ಯೇಕ ಸಚಿವಾಲಯ ಸ್ಥಾಪನೆ ಕುರಿತಂತೆ ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳು ನಿರ್ಣಯ ಕೈಗೊಂಡಿz್ದÁರೆ ಎಂದು ಅವರು ಹೇಳಿದರು. ಕೃಷಿಗೆ ಒತ್ತು ನೀಡಿದಂತೆ ಈ ಭಾಗದಲ್ಲಿ ಸಣ್ಣ ಕೈಗಾರಿಕೆಗಳ ಸ್ಥಾಪನೆಗೆ ಗಮನ ನೀಡಿದಲ್ಲಿ ಕಾರ್ಮಿಕರ ಒಲಸೆ ಸಮಸ್ಯೆ ನಿವಾರಣೆಯಾಗಲಿದೆ ಎಂದರು.

ಸಣ್ಣ ಕೈಗಾರಿಕೆಗಳ ಸ್ಥಾಪನೆಗೆ ಸರ್ಕಾರ ಪ್ರೋತ್ಸಾಹಿಸುತ್ತಿದ್ದು, ಕಾಸಿಯಾ ಸೇರಿ ವಿವಿಧ ಕೈಗಾರಿಕಾ ಸಂಸ್ಥೆಗಳ ಸಮಸ್ಯೆಗಳನ್ನು ಸರ್ಕಾರದ ಇತಿಮಿತಿಯಲ್ಲಿ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು. ಉದ್ದಿಮೆದಾರರಿಗೆ ರಫ್ತು ಕುರಿತು ತರಬೇತಿ ಸಹ ನೀಡಿ ಪ್ರೋತ್ಸಾಹಿಸಲಾಗುತ್ತಿದೆ ಎಂದು ಹೇಳಿದರು.

ಜಿ¯್ಲÁಧಿಕಾರಿ ಹರ್ಷಲï ಭೋಯರ್ ಮಾತನಾಡಿ, ಆರ್ಥಿಕ ಬೆಳವಣಿಗೆ ಹಾಗೂ ಉದ್ಯೋಗಾವಕಾಶಗಳ ಹೆಚ್ಚಿನ ಸೃಷ್ಟಿಗೆ ಸಣ್ಣ ಕೈಗಾರಿಕೆಗಳು ಬಹುಮುಖ್ಯ. ಉದ್ದಿಮೆದಾರರು ಆಧಾರ್ ಸ್ತಂಭವಾಗಿದ್ದು, ಜಿ¯್ಲÁಡಳಿತ ವತಿಯಿಂದ ಅವಶ್ಯಕ ನೆರವು ಒದಗಿಸಲಾಗುವುದು ಎಂದ ಎಂದರು. ಜಿ¯್ಲÁ ವಾಣಿಜ್ಯ ಹಾಗೂ ಕೈಗಾರಿಕೆ ಸಂಸ್ಥೆ ಅಧ್ಯP್ಷÀ ದಿನೇಶಕುಮಾರ ಜೈನ ಮಾತನಾಡಿದರು.

ರೈಸ್ ಮಿಲï ಅಸೋಸಿಯೇಷನ್ ಅಧ್ಯP್ಷÀ ಹನುಮದಾಸ್ ಮುಂದಡಾ, ಸುರಪುರ ಕೈಗಾರಿಕೆ ಸಂಘದ ಅಧ್ಯP್ಷÀ ಮಲ್ಲಿಕಾರ್ಜುನ ಜೆಟ್ಟಿ, ಜಿ¯್ಲÁ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಬಿ.ಸತೀಶಕುಮಾರ್, ಕಾರ್ಯದರ್ಶಿ ಗುರು ಮಣಿಕಂಠ, ವಿಟಿಪಿಸಿ ಸಹಾಯಕ ನಿರ್ದೇಶಕ ಜಾಫರ್ ಅನ್ಸಾರಿ, ಡೆಪ್ಯುಟಿ ಜನರಲï ಮ್ಯಾನೇಜರ ಕುಲಶೇಖರನ್ ಉಪಸ್ಥಿತರಿದ್ದರು. ರಿಪೋರ್ಟ್ ಆನ್ ಕರ್ನಾಟಕ ಎಕ್ಸ್ ಪೋರ್ಟ್ ಪುಸ್ತಕವನ್ನು ಸಚಿವರು ಬಿಡುಗಡೆ ಮಾಡಿದರು. ಉಪಾಧ್ಯP್ಷÀ ನಿಂಗಣ್ಣ ಬಿರಾದರ್ ಸ್ವಾಗತಿಸಿದರು.